Home ರಾಜಕೀಯ NDA ಸೇರಿದ JDS: ಅಧಿಕೃತ ಘೋಷಣೆ ಮಾಡಿದ J P ನಡ್ಡಾ, HDK

NDA ಸೇರಿದ JDS: ಅಧಿಕೃತ ಘೋಷಣೆ ಮಾಡಿದ J P ನಡ್ಡಾ, HDK

0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಾಜಿ ಪ್ರಧಾನಿ ದೇವೇಗೌಡರ ಜನತಾದಳ ಸೆಕ್ಯುಲರ್ (ಜೆಡಿಎಸ್) ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರ್ಪಡೆಗೊಂಡಿದೆ.

ಶುಕ್ರವಾರ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಉಪಸ್ಥಿತರಿದ್ದರು. ವಿಶ್ವಸನೀಯ ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ದೃಷ್ಟಿಯಿಂದ ಕರ್ನಾಟಕದಲ್ಲಿ ಸೀಟು ಹಂಚಿಕೆ ಕುರಿತು ಮೂವರು ನಾಯಕರ ನಡುವೆ ಚರ್ಚೆ ನಡೆದಿದೆ.

ಸಭೆಯ ಬಳಿಕ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಜೆಡಿಎಸ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸೇರ್ಪಡೆಯಾಗಿದೆ ಎಂದು ತಿಳಿಸಿದ್ದಾರೆ. ಅವರು ಇದನ್ನು X ನಲ್ಲಿ ಪೋಸ್ಟ್ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕರ್ನಾಟಕದ ಮಾಜಿ ಸಿಎಂ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಅವರು, ಜೆಡಿಎಸ್ ಎನ್‌ಡಿಎ ಸೇರಲು ನಿರ್ಧರಿಸಿರುವುದು ಸಂತಸ ತಂದಿದೆ ಎಂದ ಅವರು, ಕುಮಾರಸ್ವಾಮಿ ಅವರನ್ನು ತುಂಬು ಹೃದಯದಿಂದ ಎನ್‌ಡಿಎಗೆ ಸ್ವಾಗತಿಸುವುದಾಗಿ ಹೇಳಿದರು. ಈ ಸೇರ್ಪಡೆಯಿಂದ ಪ್ರಧಾನಿ ಮೋದಿಯವರ ನವ ಭಾರತ, ಬಲಿಷ್ಠ ಭಾರತ ಕಲ್ಪನೆಗೆ ಮತ್ತಷ್ಟು ಬಲ ಬರಲಿದೆ ಎಂದು ಹೇಳಿದರು.ಮತ್ತೊಂದೆಡೆ ಎನ್‌ಡಿಎ ಜೊತೆಗಿನ ಮೈತ್ರಿ ನಿರ್ಧಾರವಾಗಿದೆ.. ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಸ್ತುತ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಈ ವರ್ಷ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಇದರಿಂದ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಯಿತು. ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿವೆ. ಇಂತಹ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಈ ಮೈತ್ರಿಯನ್ನು ನಿರ್ಣಾಯಕ ಎಂದು ಪರಿಗಣಿಸಲಾಗಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಸ್ಥಾನಗಳಿವೆ.2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ.ತನ್ನನ್ನು ಬೆಂಬಲಿಸಿದ ಸ್ವತಂತ್ರ ಪಕ್ಷದಿಂದ ಒಂದು ಸ್ಥಾನವನ್ನು ಗೆದ್ದಿದೆ. ಇದೇ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ.

ಈ ಮೈತ್ರಿಯಿಂದ ಬಿಜೆಪಿಗೆ JDS ಬಲಾಢ್ಯವಾಗಿರುವ ಹಳೇ ಮೈಸೂರು ವಿಭಾಗದಲ್ಲಿ ಇನ್ನಷ್ಟು ಗಟ್ಟಿಯಾಗಿ ಬೇರೂರರಲು ಸಹಾಯ ಮಾಡಬಹುದು ಎನ್ನಲಾಗಿದೆ. ಆದರೆ ಇದು JDS ಪಾಲಿಗೆ ಆತ್ಮಹತ್ಯಾತ್ಮಕವಾಗಿ ಪರಿಣಮಿಸುವ ಸಾಧ್ಯತೆಯೇ ಹೆಚ್ಚು ಎನ್ನುತ್ತಿದ್ದಾರೆ ರಾಜಕೀಯ ತಜ್ಞರು. ಯಾಕೆಂದರೆ ಬಿಜೆಪಿಯೊಡನೆ ಕೈಜೋಡಿಸಿ ಇದುವರೆಗೆ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವಲ್ಲಿ ಯಾವುದೇ ಪ್ರಾದೇಶಿಕ ಪಕ್ಷ ಯಶಸ್ವಿಯಾಗಿಲ್ಲವೆನ್ನುವುದು ಇಲ್ಲಿ ಗಮನಾರ್ಹ.

ರಾಮನಗರದಲ್ಲಿ ತನ್ನ ಮಗ ಚುನಾವಣೆಯಲ್ಲಿ ಸೋತಿದ್ದರಿಂದ ಕುಮಾರಸ್ವಾಮಿ ಹತಾಶರಾಗಿದ್ದು, ತಮ್ಮ ಸಾಂಪ್ರದಾಯಿಕ ವೋಟ್‌ ಬ್ಯಾಂಕ್‌ ಆಗಿರುವ ಮುಸ್ಲಿಮರಿಂದ ದೂರ ಸರಿಯಲು ನಿರ್ಧರಿಸಿದಂತಿದೆ.

ಅದೇ ಸಮಯಕ್ಕೆ ಹಾಸನ ಬಿಜೆಪಿಯಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರುವ ಸಾಧ್ಯತೆಗಳೂ ನಿಚ್ಚಳವಾಗಿ. ಅಲ್ಲಿನ ಮಾಜಿ ಬಿಜೆಪಿ ಶಾಸಕ ಜೆಡಿಎಸ್‌ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಸುದ್ದಿ ಬಂದ ದಿನದಿಂದಲೇ ಅಪಸ್ವರ ಹೊರಡಿಸುತ್ತಿದ್ದರು. ಈಗ ಮೈತ್ರಿ ಖಾತರಿಯಾಗಿರುವುದರಿಂದ ಅವರ ಮುಂದಿನ ನಡೆ ಹೇಗಿರಬಹುದು ಎನ್ನುವ ಕುತೂಹಲ ಜನರಲ್ಲಿ ಮೂಡಿದೆ.

ಅಲ್ಲದೆ ಸಿ ಎಮ್‌ ಇಬ್ರಾಹಿಂ ಅವರಂತಹ ನಾಯಕರು ಈ ಮೈತ್ರಿಯನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲವೂ ಮೂಡಿದೆ.

You cannot copy content of this page

Exit mobile version