Friday, June 28, 2024

ಸತ್ಯ | ನ್ಯಾಯ |ಧರ್ಮ

ಜಾರ್ಖಂಡ್‌: ವಿಧಾನಸಭೆಯಲ್ಲಿ ವಿಶ್ವಾಸಮತ ಸಾಭಿತುಪಡಿಸಿದ ಸಿಎಂ ಸೊರೇನ್‌

ರಾಂಚಿ: ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಧಿಸಿದ್ದಾರೆ.

81 ಸದಸ್ಯತ್ವ ಬಲದ ವಿಧಾನಸಭೆಯಲ್ಲಿ ಸಿಎಂ ಸೊರೇನ್‌ ಪರವಾಗಿ 41 ಮತಗಳು ಚಲಾವಣಿಯಾದವು. ಇವರು ಮಂಡಿಸಿದ ವಿಶ್ವಾಸ ಮತವನ್ನು ಜಾರ್ಖಂಡ್‌ ವಿಧಾನಸಭೆ ಅಂಗೀಕರಿಸಿತು.

ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸೊರೇನ್‌, ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರಗಳನ್ನು ಹೊಡೆದುಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಚುನಾವಣೆಯನ್ನು ಗೆಲ್ಲಲು ಬಿಜೆಪಿಯು ಗಲಭೆ ಹುಟ್ಟುಹಾಕುವ ಮೂಲಕ ದೇಶದಲ್ಲಿ ಅಂತರಿಕ ಕಲಹವನ್ನುಂಟು ಮಾಡಲು ಪ್ರಯತ್ನಿಸುತ್ತಿರುವುದರಿಂದ ವಿಶ್ವಾಸಮತ ಸಾಬೀತು ಪಡಿಸುವುದು ಅನಿವಾರ್ಯವಾಗಿತ್ತು ಎಂದರು.

Related Articles

ಇತ್ತೀಚಿನ ಸುದ್ದಿಗಳು