Home ಆರೋಗ್ಯ ಕೋವಿಡ್ ರೂಪಾಂತರಿ JN 1 ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿ : ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ

ಕೋವಿಡ್ ರೂಪಾಂತರಿ JN 1 ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿ : ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ

0

ಕೋವಿಡ್ ರೂಪಾಂತರಿ ವೈರಸ್ JN 1 ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಜೆ ಎನ್ 1 ಉಪತಳಿ ಆತಂಕದ ನಡುವೆಯೇ ಕೊರೊನಾ ಸೋಂಕಿಗೆ ಮಂಗಳವಾರ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಚಾಮರಾಜಪೇಟೆ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯ ಸ್ಯಾಂಪಲ್ ನ್ನು ಜಿನೋವಿಕ್ ಸೀಕ್ವೆನ್ಸಿಂಗ್ ಕಳುಹಿಸಲಾಗಿತ್ತು. ಇಂದು ಬಂದಿರುವ ಮಾಹಿತಿಯಂತೆ ಮೃತ ವ್ಯಕ್ತಿ ಕೋವಿಡ್ ರೂಪಾಂತರಿ JN 1 ನಿಂದ ಮೃತಪಟ್ಟಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಹಾಗೆಯೇ ಕೋವಿಡ್ ಪರೀಕ್ಷೆ ಹೆಚ್ಚು ನಡೆಸಲು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲೂ ಕಡ್ಡಾಯ ಸೂಚನೆ ನೀಡಲಾಗಿದೆ.

ಈ ನಡುವೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಹಾಗೂ ಸದ್ಯದ ಸ್ಥಿತಿ ಗತಿಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವರ್ಚುವಲ್ ಮೂಲಕ ಮಹತ್ವದ ಸಭೆಯ ನಡೆಸುತ್ತಿದ್ದಾರೆ. ಸಭೆಯಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದಾರೆ.

You cannot copy content of this page

Exit mobile version