Friday, June 14, 2024

ಸತ್ಯ | ನ್ಯಾಯ |ಧರ್ಮ

ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ದೀಪಂಕರ್‌ ದತ್ತಾ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ: ನ್ಯಾಯಮೂರ್ತಿ ದೀಪಂಕರ್‌ ದತ್ತಾ ಅವರು ಇಂದು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

1965 ರಲ್ಲಿ ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾ.ಸಲೀಲ್‌ ಕುಮಾರ್‌ ದತ್ತಾ ಅವರ ಪುತ್ರ ದೀಪಂಕರ್‌ ದತ್ತಾ. ಇವರು 1989 ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪಡೆದು ವಕೀಲರಾಗಿ ಸೇರಿಕೊಂಡರು.

ಮೊದಮೊದಲು ಸಾಂವಿಧಾನಿಕ ಮತ್ತು ಸಿವಿಲ್‌ ವಿಷಯಗಳಲ್ಲಿ ಪ್ರಾಥಮಿಕವಾಗಿ ಸರ್ವೋಚ್ಚ ನ್ಯಾಯಾಲಯ ಮತ್ತು ಹೈಕೋರ್ಟ್‌ಗಳಲ್ಲಿ ಅಭ್ಯಾಸ ಮಾಡಿ ನಂತರ ಜೂನ್‌ 22,2006 ರಂದು ಕಲ್ಕತ್ತಾ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು.

2020 ಏಪ್ರಿಲ್‌ ನಲ್ಲಿ ನ್ಯಾಯಮೂರ್ತಿ ದತ್ತಾ ಅವರನ್ನು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು.

ಇದೀಗ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಸೋಮವಾರದಂದು ಪ್ರಮಾಣ ವಚನ ಸ್ವೀಕರಿಸಿದ್ದು, ಉನ್ನತ ನ್ಯಾಯಾಲಯದ ಕಾರ್ಯನಿರ್ವಹಣಾ ಬಲ ಮತ್ತಷ್ಟು ಹೆಚ್ಚಾಗಿದೆ.

Related Articles

ಇತ್ತೀಚಿನ ಸುದ್ದಿಗಳು