Friday, October 25, 2024

ಸತ್ಯ | ನ್ಯಾಯ |ಧರ್ಮ

ಹೊಸ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ: ಅಧ್ಯಕ್ಷೆ ದ್ರೌಪದಿ ಮುರ್ಮು ಅನುಮೋದನೆ

ಹೊಸದೆಹಲಿ, ಅಕ್ಟೋಬರ್ 24: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕಗೊಂಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇಮಕಾತಿಗೆ ಒಪ್ಪಿಗೆ ಮುದ್ರೆ ಹಾಕಿದ್ದಾರೆ. ಪ್ರಸ್ತುತ ಸಿಜೆಐ ಆಗಿರುವ ಡಿವೈ ಚಂದ್ರಚೂಡ್ ಅವರು ನವೆಂಬರ್ 10ರಂದು ನಿವೃತ್ತರಾಗಲಿದ್ದಾರೆ. ಇದರೊಂದಿಗೆ ಸಂಜೀವ್ ಖನ್ನಾ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೀವ್ ಖನ್ನಾ ಆರು ತಿಂಗಳು ಮಾತ್ರ ಈ ಹುದ್ದೆಯಲ್ಲಿ ಇರಲಿದ್ದಾರೆ. ಅವರು ಮೇ 13, 2025ರಂದು ನಿವೃತ್ತರಾಗಲಿದ್ದಾರೆ. ಪ್ರಸ್ತುತ ಸಿಜೆಐ ಚಂದ್ರಚೂಡ್ ಅವರು ನವೆಂಬರ್ 8, 2022ರಿಂದ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ.

ಮೇ 14, 1960 ರಂದು ನವದೆಹಲಿಯಲ್ಲಿ ಜನಿಸಿದ ಸಂಜೀವ್ ಖನ್ನಾ ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಕಾನೂನು ಕೇಂದ್ರದಲ್ಲಿ ಕಾನೂನು ಅಧ್ಯಯನ ಮಾಡಿದರು. 2005ರಲ್ಲಿ ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. 2006ರಲ್ಲಿ ಕಾಯಂ ನ್ಯಾಯಾಧೀಶರಾದರು. ಅವರು ಜನವರಿ 18, 2019ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ, ಅವರು ಅನೇಕ ಪ್ರಸಿದ್ಧ ತೀರ್ಪುಗಳಲ್ಲಿ ಪಾಲುದಾರರಾಗಿದ್ದರು. ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಯನ್ನು ಸಮರ್ಥಿಸಿಕೊಂಡ ಅವರು, ಅವು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತವೆ ಮತ್ತು ಅವುಳಗಳನ್ನು ಬಳಸಿ ನಕಲಿ ಮತಗಳು ಮತ್ತು ಬೂತ್‌ಗಳಲ್ಲಿ ರಿಗ್ಗಿಂಗ್ ಅನ್ನು ತಡೆಯಬಹುದು ಎಂದು ಹೇಳಿದ್ದರು. ಅಲ್ಲದೆ, ಚುನಾವಣಾ ಬಾಂಡ್‌ಗಳ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠದಲ್ಲಿ ಖನ್ನಾ ಇದ್ದರು. ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿದ ಪೀಠದ ಸದಸ್ಯರೂ ಆಗಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page