ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ರಾಜೀನಾಮೆ ನೀಡಿದ ಬೆನ್ನಲ್ಲೇ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಕೆ.ಅನ್ವರ್ ಬಾಷಾ ಅವರು ಆಯ್ಕೆ ಆಗುವ ಸಾಧ್ಯತೆ ಇದೆ.
ಕೆ.ಅನ್ವರ್ ಬಾಷಾ ಹಾಲಿ ವಕ್ಫ್ ಬೋರ್ಡ್ ಸದಸ್ಯರಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇವರು ಬೋರ್ಡ್ ನ ಸದಸ್ಯರಾಗಿ ಅಧಿಕಾರ ನಿರ್ವಹಿಸಿದ್ದರು. ಚಿತ್ರದುರ್ಗ ಮೂಲದ ಕೆ.ಅನ್ವರ್ ಬಾಷಾಗೆ ಹೊಸ ಅಧ್ಯಕ್ಷ ಸ್ಥಾನ ಎಲ್ಲಾ ಸಾಧ್ಯತೆ ಇದೆ.
ಅಚ್ಚರಿಯ ಬೆಳವಣಿಗೆಯಲ್ಲಿ ಇಂದು ಎನ್.ಕೆ.ಮಹಮದ್ ಶಾಫಿ ಸ ಅದಿ ರಾಜೀನಾಮೆ ಸಲ್ಲಿಸಿದ್ದರು.
ಅತೀ ಶೀಘ್ರದಲ್ಲೇ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದೆ.
ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಶಾಫಿ ಸ ಅದಿ ಮತ್ತು ಬಿಜೆಪಿ ನಾಮನಿರ್ದೇಶಿತ ಸದಸ್ಯರನ್ನು ವಜಾಗೊಳಿಸಲಾಗಿತ್ತಾದರೂ ಕೆಲವೇ ಗಂಟೆಗಳಲ್ಲಿ ಆದೇಶವನ್ನು ತಡೆಹಿಡಿದು ಹಾಲಿ, ಅಧ್ಯಕ್ಷರು ಸದಸ್ಯರನ್ನು ಮುಂದುವರೆಸಲಾಗಿತ್ತು.
ವಕ್ಫ್ ಮಂಡಳಿ ಸದಸ್ಯರೂ ಆಗಿರುವ ಶಾಸಕ ತನ್ವೀರ್ ಸೇಠ್ ಅವರ ಹೆಸರೂ ಕೂಡ ಅಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದ್ದು, ಯಾರ ಆಯ್ಕೆಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.