Home ನಿಧನ ಸುದ್ದಿ ಖಾಸಗಿತನ ಮೂಲಭೂತ ಹಕ್ಕು ಎಂಬ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಕಾರಣರಾದ ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ ನಿಧನ

ಖಾಸಗಿತನ ಮೂಲಭೂತ ಹಕ್ಕು ಎಂಬ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಕಾರಣರಾದ ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ ನಿಧನ

0

ಬೆಂಗಳೂರು: ಆಧುನಿಕ ಭಾರತದ ಅತ್ಯಂತ ಮಹತ್ವದ ಪೆಟಿಷನ್ ಒಂದಾದ‌ ಆಧಾರ್‌ ಕಾರ್ಡ್ ವಿರುದ್ಧದ ಅರ್ಜಿಗಾಗಿ‌ ಹೆಸರುವಾಸಿಯಾಗಿದ್ದ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ೯98 ವರ್ಷ) ಅವರು ನಿಧನರಾಗಿದ್ದಾರೆ.

ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು 2012 ರಲ್ಲಿ ಆಧಾರ್ ಅನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರು ಆಧಾರ್ ಕಾರ್ಡ್‌ ಬಗ್ಗೆ ಪ್ರಶ್ನೆಯನ್ನು ಎತ್ತಿದ ಮೊದಲ ವ್ಯಕ್ತಿಯಾಗಿದ್ದರೂ, ಕೊನೆಯಲ್ಲಿ ಇತರ 26 ಅರ್ಜಿಗಳನ್ನು ಇವರ ಅರ್ಜಿಗಳೊಂದಿಗೆ ಸೇರಿಸಲಾಯಿತು. ಪ್ರಕರಣದ ತೀರ್ಪಿನಲ್ಲಿ ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ಈ ತೀರ್ಪಿನ ಹಿನ್ನಲೆಯಲ್ಲಿ ಅವರು “ಆಧಾರ್ ನೋಂದಣಿಯನ್ನು ಸ್ವಯಂಪ್ರೇರಿತವಾಗಿ ಮಾಡಬಹುದು ಎಂಬುದು ನನ್ನ ವಾದವಾಗಿತ್ತು, ಈ ವಿಚಾರದಲ್ಲಿ ನನ್ನ ಯಾವುದೇ ಪೆಟಿಷನ್‌ ಇರಲಿಲ್ಲ,” ಎಂದು ಹೇಳಿದ್ದರು.

ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಮತ್ತು ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು.

1977ರಲ್ಲಿ ಕರ್ನಾಟಕ ಹೈಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 1986ರಲ್ಲಿ ನಿವೃತ್ತರಾದರು. ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ಕೇಂದ್ರೀಯ ಆಡಳಿತ ನ್ಯಾಯಮಂಡಳಿಯ ಬೆಂಗಳೂರು ಪೀಠದ ಉಪಾಧ್ಯಕ್ಷರಾಗಿ, ಆಂಧ್ರಪ್ರದೇಶದ ಆಡಳಿತ ನ್ಯಾಯಮಂಡಳಿಯ ಅಧ್ಯಕ್ಷರಾಗಿ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಐತಿಹಾಸಿಕ ತೀರ್ಪನ್ನು ಇಲ್ಲಿ ಓದಿ: Justice K.S.Puttaswamy(Retd) vs Union Of India on 26 September, 2018

You cannot copy content of this page

Exit mobile version