Monday, June 24, 2024

ಸತ್ಯ | ನ್ಯಾಯ |ಧರ್ಮ

ಕಲಬುರಗಿ ರೈಲ್ವೆ ನಿಲ್ದಾಣದ ಗೋಡೆಗಳಿಗೆ ಹಸಿರು ಬಣ್ಣ: ಹಿಂದೂ ಸಂಘಟನೆಗಳ ವಿರೋಧ

ಕಲಬುರಗಿ: ಕಲಬುರಗಿ ರೈಲು ನಿಲ್ದಾಣದ ಗೋಡೆಗಳಿಗೆ ಹಸಿರು ಬಣ್ಣ ಬಳಿದಿದ್ದು, ಅದನ್ನು ಹಿಂದೂ ಸಂಘಟನೆಗಳು ವಿರೋಧಿಸಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಎಚ್ಚರಿಸಿವೆ.

15 ದಿನಗಳ ಒಳಗೆ ಹಸಿರು ಬಣ್ಣವನ್ನು ತೆಗೆಯದಿದ್ದರೆ, ಒಟ್ಟು ರೈಲು ನಿಲ್ದಾಣಕ್ಕೆ ಕೇಸರಿ ಬಣ್ಣ ಬಳಿಯಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

ಪ್ರಸ್ತುತ, ರೈಲ್ವೆ ನಿಲ್ದಾಣದ ಎರಡು ಗೋಡೆಗಳಿಗೆ ಹಸಿರು ಬಣ್ಣ ಬಳಿಯಲಾಗಿದ್ದು, ಈ ವಿರುದ್ಧ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ನಂತರ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವ ನಿಟ್ಟಿನಲ್ಲಿ ಇದನೆಲ್ಲಾ ಮಾಡಲಾಗುತ್ತಿದೆ ಎಂದು ಹಿಂದೂ ಸಂಘಟನಕಾರರು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದೂ ಸಂಘಟನೆಯ ಕಾರ್ಯಕರ್ತ ಲಕ್ಷ್ಮೀಕಾಂತ ಸಾಧ್ವಿ, ʼರೈಲ್ವೆ ನಿಲ್ದಾಣದ ಕಟ್ಟಡಕ್ಕೆ ಹಸಿರು ಬಣ್ಣವನ್ನು ಹೊರತುಪಡಿಸಿ ಬೇರೆ ಯಾವುದೇ ಬಣ್ಣ ಬಳಿದರು ಸಮಸ್ಯೆ ಇಲ್ಲಾ. ಕನ್ನಡ ಧ್ವಜದ ಹಳದಿ ಮತ್ತು ಕೆಂಪು ಬಣ್ಣಗಳನ್ನು ಸಹ ಬಳಸಬಹುದು. ಇಲ್ಲದಿದ್ದರೆ, ರೈಲ್ವೆ ಕಟ್ಟಡಕ್ಕೆ ಕೇಸರಿ ಬಣ್ಣ ಬಳಿಯಲಾಗುತ್ತದೆʼ ಎಂದು ತಿಳಿಸಿದ್ದಾರೆ.

ರೈಲ್ವೆ ಅಧಿಕಾರಿಗಳು ರೈಲ್ವೆ ನಿಲ್ದಾಣದ ಮುಂಭಾಗದ ಚಿತ್ರಕಲಾ ಕೆಲಸವನ್ನು ಕೈಗೆತ್ತಿಕೊಂಡಿದ್ದರು, ಆದರೆ ವಿರೋಧ ಮತ್ತು ಪ್ರತಿಭಟನೆಯ ನಂತರ ಚಿತ್ರಕಲಾ ಕೆಲಸವನ್ನು ನಿಲ್ಲಿಸಿದ್ದಾರೆ.

ಕಲಬುರಗಿ ರೈಲ್ವೆ ನಿಲ್ದಾಣದ ಸಿಬ್ಬಂದಿ ಸತ್ಯನಾರಾಯಣ ದೇಸಾಯಿ ಮಾತನಾಡಿ, ಉನ್ನತ ಅಧಿಕಾರಿಗಳ ಆದೇಶದ ಮೇರೆಗೆ ವರ್ಣಚಿತ್ರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ವಾಸ್ತುಶಿಲ್ಪಿಗಳ ಸಲಹೆಯ ಆಧಾರದ ಮೇಲೆ ವರ್ಣಚಿತ್ರವನ್ನು ಮಾಡಲಾಯಿತು. ರೈಲ್ವೆ ನಿಲ್ದಾಣಕ್ಕೆ ಮತ್ತೊಂದು ಬಣ್ಣ ಬಳಿಯುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು