Friday, July 25, 2025

ಸತ್ಯ | ನ್ಯಾಯ |ಧರ್ಮ

ರಾಜ್ಯಸಭೆಗೆ ಪಾದಾರ್ಪಣೆ ಮಾಡಿದ ಕಮಲ್ ಹಾಸನ್; ತಮಿಳಿನಲ್ಲಿ ಪ್ರಮಾಣವಚನ ಸ್ವೀಕಾರ

ನಟ ಮತ್ತು ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಮುಖ್ಯಸ್ಥ ಕಮಲ್ ಹಾಸನ್ ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕರಿಸುವಾಗ ತಮಿಳಿನಲ್ಲಿ ತಮ್ಮ ಪ್ರಮಾಣ ವಚನ ಸ್ವೀಕರಿಸುವಾಗ ಸಹ ಸಂಸದರಿಂದ ಬಾರಿ ಮೆಚ್ಚುಗೆ ಕೇಳಿ ಬಂದಿದೆ.

“ನಾನು ಇಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ನನ್ನ ಹೆಸರನ್ನು ನೋಂದಾಯಿಸಿಕೊಳ್ಳಲಿದ್ದೇನೆ. ಒಬ್ಬ ಭಾರತೀಯನಾಗಿ ನನಗೆ ನೀಡಿದ ಗೌರವದಿಂದ ನಾನು ಈ ಕರ್ತವ್ಯವನ್ನು ಗೌರವಯುತವಾಗಿ ಪೂರೈಸಲಿದ್ದೇನೆ” ಎಂದು ಹಾಸನ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕಮಲ್ ಹಾಸನ್ 2018 ರಲ್ಲಿ ಮಧುರೈನಲ್ಲಿ ಮಕ್ಕಳ್ ನೀಧಿ ಮಯ್ಯಮ್ ಪಕ್ಷವನ್ನು ಪ್ರಾರಂಭಿಸಿದರು. 2024 ರ ಲೋಕಸಭಾ ಚುನಾವಣೆಯಲ್ಲಿ ಎಂಎನ್ಎಂ ಪಕ್ಷ ಸ್ಪರ್ಧಿಸದಿದ್ದರೂ, ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಇಂಡಿಯಾ ಬ್ಲಾಕ್ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿತು. ಅದಕ್ಕೆ ಪ್ರತಿಯಾಗಿ ಈಗ ಡಿಎಂಕೆ ಕಮಲ್ ಹಾಸನ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page