Monday, July 28, 2025

ಸತ್ಯ | ನ್ಯಾಯ |ಧರ್ಮ

ಕಂಚುಗಲ್ ಬಂಡೇ ಮಠದ ಸ್ವಾಮೀಜಿ ಆತ್ಮಹತ್ಯೆ

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಶ್ರೀ ಕಂಚುಗಲ್ ಬಂಡೇ ಮಠದ ಶ್ರೀ ಬಸವಲಿಂಗ ಸ್ವಾಮಿಗಳು ಮಠದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ಇನ್ನೂ ತಿಳಿದುಬಂದಿಲ್ಲ.

ಸ್ವಾಮೀಜಿ ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ವಾಮೀಜಿಯ ಆತ್ಮಹತ್ಯೆ ಪ್ರಕರಣದ ಹಿಂದೆ ತೀವ್ರ ಅನುಮಾನ ಹುಟ್ಟಿಸಿದೆ.

ಮೂರು ತಿಂಗಳ ಹಿಂದೆ ಕಡಲೆ ಮಠದ ಸ್ವಾಮೀಜಿ ಕೂಡ ಇದೇ ರೀತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ರು. ಇಲ್ಲಿಯವರೆಗೆ ಆ ಬಗ್ಗೆ ಕಾರಣ ತಿಳಿದುಬಂದಿಲ್ಲ. ಕಂಚುಗಲ್ ಬಂಡೇ ಮಠಕ್ಕೆ ರಾಮನಗರ ಜಿಲ್ಲಾ ಕುದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page