Friday, October 25, 2024

ಸತ್ಯ | ನ್ಯಾಯ |ಧರ್ಮ

ಕನ್ನಡ ನಾಮಫಲಕ ವಿವಾದ ; ಪ್ರಶ್ನಿಸಿದ ಅರ್ಜಿದಾರ ಸಂಸ್ಥೆಗಳಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ

ಬೆಂಗಳೂರಿನಲ್ಲಿ ವ್ಯಾಪಾರ, ವ್ಯವಹಾರದ ವಹಿವಾಟು ನಡೆಸುವ ಅಂಗಡಿ, ಮಳಿಗೆ ಅಥವಾ ಯಾವುದೇ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಬಿಬಿಎಂಪಿ ಸುತ್ತೋಲೆ ಪ್ರಶ್ನಿಸಿ ಪ್ರತಿಷ್ಠಿತ ವಾಣಿಜ್ಯ ಸಂಸ್ಥೆಗಳು ಅರ್ಜಿಯನ್ನು ತುರ್ತು ವಿಚಾರಣೆಗೆ ಹೈಕೋರ್ಟ ಅಸಮ್ಮತಿ ಸೂಚಿಸಿದೆ. ಆ ಮೂಲಕ ‘ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು’ ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ಹೇಳಿದೆ.

ಬಿಬಿಎಂಪಿ ಆದೇಶ ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಆದಿತ್ಯ ಬಿರ್ಲಾ ಫ್ಯಾಷನ್ ಆ್ಯಂಡ್ ರೀಟೇಲ್ ಲಿಮಿಟೆಡ್, ಟೈಟಾನ್ ಕಂಪನಿ ಲಿಮಿಟೆಡ್, ಅಡಿಡಾಸ್ ಇಂಡಿಯಾ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 24 ಪ್ರತಿಷ್ಠಿತ ಖಾಸಗಿ ಸಂಸ್ಥೆಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಕೋರಿದರು. ಆ ಮನವಿ ತಳ್ಳಿಹಾಕಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ‘ನೀವು (ವಾಣಿಜ್ಯ ಸಂಸ್ಥೆಗಳು) ಕರ್ನಾಟಕದಲ್ಲಿ ವಹಿವಾಟು ನಡೆಸುತ್ತಿದ್ದೀರಿ ಎಂದಾದ ಮೇಲೆ ನಿಮ್ಮ ಸೂಚನಾ ಫಲಕಗಳನ್ನು ಕನ್ನಡದಲ್ಲೇ ಪ್ರದರ್ಶಿಸಬೇಕು. ಅದಕ್ಕೆ ಯಾವುದೇ ವಿನಾಯಿತಿ ನೀಡಲಾಗದು’ ಎಂದು ಮೌಖಿಕವಾಗಿ ಹೇಳಿದರು.

ಕನ್ನಡ ಭಾಷಾ ರಕ್ಷಣೆಗೆ ಸಂಬಂಧಿಸಿದಂತೆ ಶ್ರಮಿಸುತ್ತಿರುವ ಕನ್ನಡ ರಕ್ಷಣಾ ವೇದಿಕೆಗಳ ಹೋರಾಟವನ್ನು ಪ್ರಸ್ತಾಪಿಸಿದರು. ನಂತರ ಅರ್ಜಿದಾರರ ವಿರುದ್ಧದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರು ವಿಚಾರಣೆಯನ್ನು ಮುಂದೂಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page