ಕನ್ನಡಿಗರೊಬ್ಬರು AICC ಅಧ್ಯಕ್ಷರಾಗಿರುವುದು ಹೆಮ್ಮೆಯ ಸಂಗತಿ : ಡಿಕೆಶಿ

ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಹಿರಿಯ ನಾಯಕ ಅವರು ಇಂದು ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶುಭಹಾರೈಸಿದ್ದಾರೆ.

AICC ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆಯವರು ಕನ್ನಡಿಗರೆಂದು ಡಿಕೆ ಶಿವಕುಮಾರ್‌ ಹೆಮ್ಮೆ ಪಟ್ಟಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ʼಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಇಂದು ಪ್ರಮಾಣ ವಚನ ಪಡೆಯುತ್ತಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆಗಳು. ನಿಮ್ಮ ಅನುಭವ ಹಾಗೂ ನಾಯಕತ್ವವು ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ಕನ್ನಡಿಗರೊಬ್ಬರು ಈ ಸ್ಥಾನ ಅಲಂಕರಿಸುತ್ತಿರುವುದು ಹೆಮ್ಮೆಯ ಸಂಗತಿʼ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು