ಬೆಂಗಳೂರು: ಕನ್ನಡಿಗರು ಮತ್ತು ತಮಿಳಿಗರು ಇಬ್ಬರೂ ದ್ರಾವಿಡರು ಮತ್ತು ಅವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.
ಕನ್ನಡಿಗರು ಮತ್ತು ಕನ್ನಡ ತಮಿಳರ ಸಾಂಸ್ಕೃತಿಕ ಮತ್ತು ಏಕತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯಡಿಯೂರಪ್ಪ ಅವರು ತಾನು ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಮತ್ತು ತಮಿಳು ಭಾಷಿಕರ ನಡುವೆ ಗಟ್ಟಿಯಾದ ಬಾಂಧವ್ಯವನ್ನು ಮೂಡಿಸಲು ಪ್ರಯತ್ನಿಸಿದ್ದು, ಮುಂದೆಯೂ ಅದೇ ಸೌಹಾರ್ದತೆ ಮುಂದುವರಿಯಲಿ ಎಂದು ಆಶಿಸಿದರು.
“ಮುಖ್ಯಮಂತ್ರಿಯಾಗಿ, ನಾನು ಹಲಸೂರಿನಲ್ಲಿ ಗಮನಿಸದೆ ಬಿಟ್ಟಿದ್ದ ತಿರುವಳ್ಳುವರ್ ಪ್ರತಿಮೆ ಯೋಜನೆಯನ್ನು ಪೂರ್ಣಗೊಳಿಸಿದೆ. ಚೆನ್ನೈಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ನಿರ್ಮಿಸುವಂತೆ ನಾನು ಅಂದಿನ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಕೇಳಿಕೊಂಡಿದ್ದೆ” ಎಂದು ಹೇಳಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ರಾಜ್ಯಸಭಾ ಮಾಜಿ ಸಂಸದ ಎಲ್.ಹನುಮಂತಯ್ಯ, ಶಾಸಕ ಮಂತರ್ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸಭೆಯಲ್ಲಿ ಉಪಸ್ಥಿತರಿದ್ದರು.