Wednesday, August 20, 2025

ಸತ್ಯ | ನ್ಯಾಯ |ಧರ್ಮ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ; ಅಭಿನಂದನೆಗಳ ಸುರಿಮಳೆ

ಕಾಂಗ್ರೆಸ್ ನಾಯಕ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸುಮಾರು ಎರಡು ದಶಕಗಳ ನಂತರ ಸಿಬಲ್ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ತಮ್ಮ ಸಮೀಪದ ಪ್ರತಿಸ್ಪರ್ಧಿಯನ್ನು ಭಾರಿ ಅಂತರದಿಂದ ಸೋಲಿಸಿದ ನಂತರ ಸಿಬಲ್ ಅವರಿಗೆ ಅಭಿನಂದನೆಗಳ ಸುರಿಮಳೆಯೇ ಸುರಿಯುತ್ತಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಬಲ್ ಅವರನ್ನು ಅಭಿನಂದಿಸುತ್ತಾ ಪ್ರಜಾಪ್ರಭುತ್ವ ಉಳಿವಿಗಾಗಿ ತಮ್ಮ ಹೋರಾಟವನ್ನು ಮುಂದುವರೆಸಿ ಎಂದು ಕೇಳಿಕೊಂಡಿದ್ದಾರೆ.

ಅದೇ ಸಮಯದಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಪಿಲ್ ಸಿಬಲ್ ಅವರನ್ನು ಈ ವಿಜಯಕ್ಕೆ ಅಭಿನಂದಿಸುತ್ತಾ ಅಭಿನಂದನೆಗಳು ಸರ್, ಇದು ತುಂಬಾ ಒಳ್ಳೆಯ ಸುದ್ದಿ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಭಾರಿ ಮತಗಳ ಮೂಲಕ ಆಯ್ಕೆಯಾಗಿದ್ದಾರೆ ಎಂದು ತಿಳಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಇದು ಉದಾರವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಮತ್ತು ಪ್ರಗತಿಪರ ಶಕ್ತಿಗಳಿಗೆ ದೊಡ್ಡ ಜಯವಾಗಿದೆ. ಸದ್ಯದಲ್ಲೇ ಮಾಜಿಯಾಗಲಿರುವ ಪ್ರಧಾನಿಯವರ ಮಾತಿನಲ್ಲಿ ಹೇಳುವುದಾದರೆ, ರಾಷ್ಟ್ರಮಟ್ಟದಲ್ಲಿ ಶೀಘ್ರದಲ್ಲೇ ಆಗಲಿರುವ ಬದಲಾವಣೆಗಳ ಟ್ರೇಲರ್ ಇದು ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಿಬಲ್ ಒಟ್ಟು 2350 ಮತಗಳಲ್ಲಿ 1066 ಮತಗಳನ್ನು ಪಡೆದರೆ, ಹಿರಿಯ ವಕೀಲ ಪ್ರದೀಪ್ ರೈ 689 ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಎರಡು ದಶಕಗಳ ನಂತರ ಕಪಿಲ್ ಸಿಬಲ್ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇದಕ್ಕೂ ಮುನ್ನ ಅವರು 1995, 1997 ಮತ್ತು 2001ರಲ್ಲಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page