Monday, June 17, 2024

ಸತ್ಯ | ನ್ಯಾಯ |ಧರ್ಮ

ಕರಾವಳಿಯಲ್ಲಿ ಮುಂದುವರೆದ ಮತೀಯ ಗೂಂಡಾಗಿರಿ: ಉಜಿರೆಯಲ್ಲಿ ಮುಸ್ಲಿಮ್‌ ಯುವಕ ಮೇಲೆ ಹಲ್ಲೆ

ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರ ಎಚ್ಚರಿಕೆಯ ನಡುವೆಯೂ ಕರಾವಳಿಯಲ್ಲಿ ಅನೈತಿಕ ಪೊಲೀಸ್‌ ಗಿರಿಯ ಹಾವಳಿ ಮುಂದುವರೆದಿದೆ.

ನಿನ್ನೆಯಷ್ಟೇ ಕಾಲೇಜು ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಲು ಹೋಗಿ ಕೊನೆಗೆ ಮತೀಯವಾದಿಗಳು ಪೊಲೀಸರ ವಶವಾದ ಘಟನೆ ನಿನ್ನೆಯಷ್ಟೇ ಕಾರ್ಕಳದಲ್ಲಿ ನಡೆದಿತ್ತು. ಅದರ ಬೆನ್ನಲ್ಲೇ ಈಗ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ.
ಮಹಮ್ಮದ್ ಆಶಿಕ್ ಉಜಿರೆಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದು, ಬುಧವಾರ ರಾತ್ರಿ ಬಸ್ಸಿನಲ್ಲಿ ಬೆಂಗಳೂರಿಗೆ ಹೋಗಬೇಕಾಗಿದ್ದ ಯುವತಿಯೊಬ್ಬಳನ್ನು ತನ್ನರಿಕಾದಲ್ಲಿ ಬಾಡಿಗೆಗೆ ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಕರೆದೊಯ್ದು ಬಿಟ್ಟಿದ್ದಾರೆ. ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ತಂಡವು ಬಸ್‌ ನಿಲ್ದಾಣದ ಸಮೀಪ ರಿಕ್ಷಾವನ್ನು ತಡೆದು ಆಶಿಕ್ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿವೆ ಎಂದು ದೂರಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಹುಡುಕಾಟಕ್ಕಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ

Related Articles

ಇತ್ತೀಚಿನ ಸುದ್ದಿಗಳು