ಹೊಸದಿಲ್ಲಿ: ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ ಅವಘಡದಿಂದ ಇಬ್ಬರು ಮೃತಪಟ್ಟಿದ್ದು, ಕೆಲವರು ಗಾಯಗೊಂಡಿದ್ದಾರೆ. ಇನ್ನೂ ಕೆಲವರು ಕಾರ್ಖಾನೆಯಲ್ಲೇ ಸಿಕ್ಕಿಬಿದ್ದಿರುವ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,
ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಕೆಲವರು ಕಾರ್ಖಾನೆಯಲ್ಲೇ ಸಿಕ್ಕಿಬಿದ್ದಿರುವ ಆತಂಕದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ದೆಹಲಿ ಪೊಲೀಸರು, ʼಬೆಂಕಿ ಅವಘಡದಿಂದ ಇಬ್ಬರು ಸಾವನಪ್ಪಿದ್ದುಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವರ ಗುರುತನ್ನು ಪತ್ತೆಹಚ್ಚಲಾಗುತ್ತಿದೆʼ ಎಂದು ಹೇಳಿದ್ದಾರೆ.