ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಹಲವು ಕಡೆಗಳಲ್ಲಿ ಬಂದ್ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಬೆಂಗಳೂರು ಮತ್ತು ಕರ್ನಾಟಕದ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ಬಂದ್ ನ್ನು ಸ್ವಯಂಪ್ರೇರಿತರಾಗಿ ಮಾಡುವಂತೆ ಕರೆ ನೀಡಲಾಗಿದೆ.
ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯ ಕಾರ್ಯಕರ್ತರು ಕರ್ನಾಟಕ ಸಾರಿಗೆ ಇಲಾಖೆಯ ಚಾಲಕರು ಮತ್ತು ನಿರ್ವಾಹಕರ ಮೇಲೆ ಮಾಡಿದ ಹಲ್ಲೆ ಪರಿಣಾಮ ರಾಜ್ಯ ಸರ್ಕಾರ ಮತ್ತು ಎಂಇಎಸ್ ಪುಂಡಾಟಿಕೆ ವಿರುದ್ಧ ವಾಟಾಳ್ ನಾಗರಾಜ್ ಸಿಡಿದೆದ್ದು ಬಂದ್ ಗೆ ಕರೆ ಕೊಟ್ಟಿದ್ದರು. ಅದರ ಪರಿಣಾಮವಾಗಿ ಇಂದು ರಾಜ್ಯದ ಹಲವೆಡೆ ಬಂದ್ ನಡೆಯಲಿದೆ.
ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹೋರಾಟ ಸ್ಥಗಿತವಾಗಿದ್ದು, ಕೆಎಸ್‌ಆರ್ಟಿಸಿ ಬಿಎಂಟಿಸಿ ಸಂಚಾರ ಇರುತ್ತದೆ ಆದರೂ ಕೂಡ ಅದರಲ್ಲೂ ಇನ್ನು ಗೊಂದಲ ಇದೆ. ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿದ್ದು, ಟೌನ್ ಹಾಲಿನಿಂದ ಬೆಳಿಗ್ಗೆ 6 ಗಂಟೆಯಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ.
ಇಂದು ನಡೆಯಲಿರುವ ಅಖಂಡ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಚಾಲಕರ ಒಕ್ಕೂಟ ತಿಳಿಸಿದೆ.ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಮತ್ತು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಬಂದ್‌ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಏನಿರುತ್ತೆ.?
ಮೆಡಿಕಲ್ ಶಾಪ್
ಹಾಲಿನ ಕೇಂದ್ರ
ಹಣ್ಣು-ತರಕಾರಿ ಅಂಗಡಿ
ಅಗತ್ಯ ವಸ್ತುಗಳ ಪೂರೈಕೆ ಸೇವೆ
ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಇಲ್ಲ
ಏನಿರಲ್ಲ?
ಹೋಟೆಲ್ ಕ್ಲೋಸ್
ಸಿನಿಮಾ ಥಿಯೇಟರ್
ಸರ್ಕಾರಿ ಕಚೇರಿಗಳು
ಸಾರಿಗೆ ಬಸ್ ಸಂಚಾರ
ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.
ಮಾಲ್ ಗಳು ಕ್ಲೋಸ್