ಭದ್ರಾವತಿ: ಸೇತುವೆಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 35 ಪ್ರಯಾಣಿಕರಿಗೆ ಗಾಯ

ಭದ್ರಾವತಿ: ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಸೇತುವೆಯ ಮೇಲಿಂದ ಖಾಸಗಿ ಬಸ್ಸೊಂದು ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 35 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಇಳಿಜಾರಿನ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ನಂತರ ಸೇತುವೆಯಿಂದ ಕೆಳಗಿದ್ದ ಹಳ್ಳಕ್ಕೆ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಭದ್ರಾವತಿ ನಗರ ಮತ್ತು ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಾಗಿದ್ದಾರೆ.

ಗಾಯಗೊಂಡವರ ಪೈಕಿ 17 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ 18 ಜನರನ್ನು ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು