Home ರಾಜ್ಯ ಶಿವಮೊಗ್ಗ ನೀಟ್‌ ವಿಷಯದಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ: ಬಿ ವೈ ವಿಜಯೇಂದ್ರ

ನೀಟ್‌ ವಿಷಯದಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ: ಬಿ ವೈ ವಿಜಯೇಂದ್ರ

0

ಶಿವಮೊಗ್ಗ: ಜುಲೈ 25 ಮತ್ತು 26 ರಂದು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್​​ಐಆರ್ (SIR) ಕುರಿತು ಮನೆ ಮನೆ ಜಾಗೃತಿ ಅಭಿಯಾನವನ್ನು ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಒಂದು ಕೋಟಿ ಮನೆಗಳಿಗೆ ಎಸ್​​ಐಆರ್ ಎನ್ಯುಮರೇಷನ್ ನಮೂನೆಗಳನ್ನು (SIR Enumeration Forms) ವಿತರಿಸಲಾಗುತ್ತಿದ್ದು, ಪ್ರತಿಯೊಬ್ಬ ಕಾರ್ಯಕರ್ತರು ಕನಿಷ್ಠ 20 ಮನೆಗಳನ್ನು ತಲುಪುವಂತೆ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಕ್ಷಣವೇ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ದೆಹಲಿಯಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು ರಾಜಕೀಯ ಪ್ರೇರಿತವಾಗಿದೆ ಹಾಗೂ ಕೇಂದ್ರದ ಮೋದಿ ನೇತೃತ್ವದ ಸರ್ಕಾರವನ್ನು ದುರ್ಬಲಗೊಳಿಸುವ ಉದ್ದೇಶ ಇದರ ಹಿಂದಿದೆ ಎಂದು ವಿಜಯೇಂದ್ರ ಆರೋಪಿಸಿದರು.

ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದ ವಿಷಯದಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.

You cannot copy content of this page

Exit mobile version