Saturday, January 10, 2026

ಸತ್ಯ | ನ್ಯಾಯ |ಧರ್ಮ

ಕರ್ನಾಟಕ: ಬಿಜೆಪಿ 18, ಕಾಂಗ್ರೆಸ್ 9, ಜೆಡಿಎಸ್ 2 ಕ್ಷೇತ್ರಗಳ ಮುನ್ನಡೆ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆಯ ಪ್ರಕ್ರಿಯೆ ಆರಂಭವಾಗಿದ್ದು, ಬೆಳಗಿನ ಆರಂಭಿಕ ಹಂತದಲ್ಲಿ ರಾಜ್ಯದಲ್ಲಿ ಬಿಜೆಪಿ 16 , ಕಾಂಗ್ರೆಸ್‌ 8 ಹಾಗೂ ಜೆಡಿಎಸ್‌ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ತುಕೊಂಡಿವೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯ ಮಂಜುನಾಥ್ , ತುಮಕೂರಿನಲ್ಲಿ ಬಿಜೆಪಿಯ ವಿ.ಸೋಮಣ್ಣ, ಚಿಕ್ಕೋಡಿಯಲ್ಲಿ ಕಾಂಗ್ರೆಸ್‍ನ ಪ್ರಿಯಾಂಕಾ ಜಾರಕಿಹೊಳಿ, ದಾವಣರೆಗೆಯಲ್ಲಿ ಕಾಂಗ್ರೆಸ್‍ನ ಪ್ರಭಾ ಮಲ್ಲಿಕಾರ್ಜುನ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್, ಶಿವಮೊಗ್ಗದಲ್ಲಿ ಬಿಜೆಪಿಯ ರಾಘವೇಂದ್ರ, ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ , ಹಾಸನದಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಲ್ಲದೆ, ಉ‌ತ್ತರ ಕನ್ನಡದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರ‌ ಬಿಜೆಪಿಯ ಸುಧಾಕರ್, ಧಾರವಾಡದಲ್ಲಿ ಕೆಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಚಿತ್ರದುರ್ಗದಲ್ಲಿ ಕಾಂಗ್ರೆಸ್‌ನ ಚಂದ್ರಪ್ಪ, ಮಂಡ್ಯದಲ್ಲಿ ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿ, ಕೋಲಾರದಲ್ಲಿ ಜೆಡಿಎಸ್‌ನ ಮಲ್ಲೇಶ್‌ ಬಾಬು ಮುನ್ನಡೆ ಸಾಧಿಸಿದ್ದಾರೆ.

ಇದು ಆರಂಭಿಕ ಹಂತದ ಮತ ಎಣಿಕೆಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page