Home ರಾಜ್ಯ ಸದನಕ್ಕೆ ಗೈರಾಗುವ ಸಚಿವರನ್ನು ಕೈಬಿಡಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಆಗ್ರಹ

ಸದನಕ್ಕೆ ಗೈರಾಗುವ ಸಚಿವರನ್ನು ಕೈಬಿಡಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಆಗ್ರಹ

0

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಶಾಸಕರು ಕೆಲವು ಸಚಿವರ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನವಾಗಬೇಕು ಎಂದು ಹಿರಿಯ ಶಾಸಕರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಅನಿವಾರ್ಯ ಕಾರಣಗಳ ಹೊರತಾಗಿ ಸಚಿವರು ಕಡ್ಡಾಯವಾಗಿ ಸದನದಲ್ಲಿ ಇರಬೇಕೆಂದು ಮುಖ್ಯಮಂತ್ರಿಗಳೇ ಸೂಚಿಸಿದ್ದರೂ, ಅನೇಕ ಸಚಿವರು ಇದನ್ನು ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಗ್ಯಾಸ್ ಬೆಲೆ ಏರಿಕೆಯ ವಿಷಯದಲ್ಲಿ ಬಿಜೆಪಿಯನ್ನು ಸದನದಲ್ಲಿ ತರಾಟೆಗೆ ತೆಗೆದುಕೊಳ್ಳುವಂತೆ ಶಾಸಕರಿಗೆ ಸೂಚಿಸಿದರು.

ಸಭೆಯು ಕೆಲವು ನಾಟಕೀಯ ಬೆಳವಣಿಗೆಗಳಿಗೂ ಸಾಕ್ಷಿಯಾಯಿತು. ಅಧಿಕಾರಿಗಳು ಜನಪ್ರತಿನಿಧಿಗಳ ಮಾತಿಗೆ ಬೆಲೆ ನೀಡುತ್ತಿಲ್ಲ ಎಂದು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ದೂರಿದರೆ, ಶೃಂಗೇರಿ ಶಾಸಕ ರಾಜೇಗೌಡ ಅವರು ಅಧಿಕಾರಿಗಳ ಪರವಾಗಿ ಮಾತನಾಡಿದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ನಾರಾಯಣಸ್ವಾಮಿ ಅವರು ಸಭೆಯಿಂದ ಹೊರನಡೆದರು. ಇದೇ ವೇಳೆ ಬೆಂಗಳೂರಿನ ಶಾಸಕರು ಮುಂಬರುವ ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಒತ್ತಾಯಿಸಿದರು.

You cannot copy content of this page

Exit mobile version