Home ಕರ್ನಾಟಕ ಚುನಾವಣೆ - 2023 ಕರ್ನಾಟಕ ಚುನಾವಣೆ : ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ 5 ಅಪ್ಪ – ಮಕ್ಕಳ ಜೋಡಿ!

ಕರ್ನಾಟಕ ಚುನಾವಣೆ : ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ 5 ಅಪ್ಪ – ಮಕ್ಕಳ ಜೋಡಿ!

0

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು, ಕಾಂಗ್ರೆಸ್ ಗೆ ಭರ್ಜರಿ ಬಹುಮತ ದೊರಕಿದೆ. ಮುಖ್ಯಮಂತ್ರಿ ಆಯ್ಕೆಯ ಕೆಲಸ ಬಿರುದಿನಿಂದ ಸಾಗಿದೆ. ಇದರನ ನಡುವೆ ಈ ಚುನಾವಣೆಯಲ್ಲಿ ಐದು ಅಪ್ಪ -ಮಕ್ಕಳ ಜೋಡಿ ಜಯಗಳಿಸಿದ್ದು, ಒಟ್ಟಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದು ವಿಶೇಷವಾಗಿದೆ.

ಹೌದು, ಬೆಂಗಳೂರಿನ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಕೃಷ್ಣಪ್ಪ ಮತ್ತವರ ಪುತ್ರ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ಶಾಸಕರಾಗಿ ಆಯ್ಕೆಯಾಗಿದ್ದು ಇಬ್ಬರು ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ, ಹುಣಸೂರು ಕ್ಷೇತ್ರದಲ್ಲಿ ಜಿ.ಡಿ. ಹರೀಶ್ ಗೌಡ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ. ಮಂಜು, ಅವರ ಪುತ್ರ ಮಡಿಕೇರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ 8ನೇ ಬಾರಿಗೆ ಜಯಗಳಿಸಿದ್ದು, ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಜಯಗಳಿಸಿದ್ದಾರೆ.

ದೇವನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್. ಮುನಿಯಪ್ಪ, ಅವರ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಕೆಜಿಎಫ್ ಕ್ಷೇತ್ರದಿಂದ ಶಾಸಕರಾಗಿದ್ದಾರೆ.

You cannot copy content of this page

Exit mobile version