Thursday, June 13, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕಕ್ಕೆ ಆಘಾತ: ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಹೇಳಿದ ಪ್ರಾಧಿಕಾರ

ಹೊಸದಿಲ್ಲಿ: ತಮಿಳುನಾಡಿಗೆ ಹದಿನೈದು ದಿನಗಳ ಕಾಲ ದಿನವೊಂದಕ್ಕೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ CWRC ನೀಡಿದ್ದ ಆದೇಶವನ್ನು CWMA ಎತ್ತಿಹಿಡಿದಿದೆ.

ಇದರೊಂದಿಗೆ ಕರ್ನಾಟಕವು ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನೀರು ಹರಿಸುವುದು ಅನಿವಾರ್ಯವಾಗಿದೆ. ಕರ್ನಾಟಕವು ಈ ಮೊದಲು CWRC ನೀಡಿದ್ದ ಆದೇಶವನ್ನು ಪ್ರಶ್ನಿಸಿ CWMA ಸಂಸ್ಥೆಗೆ ಮರುಪರಿಶೀಲನಾ ಮನವಿಯನ್ನು ಸಲ್ಲಿಸಿತ್ತು.

ಕೃಷ್ಣಾ ಹಾಗೂ ಕಾವೇರಿ ಕೊಳ್ಳದಲ್ಲಿ ಈಗಾಗಲೇ ನೀರಿನ ಕೊರತೆ ಎದುರಾಗಿರುವುದರಿಂದಾಗಿ ತನ್ನಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದು ಕರ್ನಾಟ ತನ್ನ ಅಸಹಾಯಕತೆಯನ್ನು ಪ್ರಾಧಿಕಾರದ ಎದುರು ತೋಡಿಕೊಂಡಿತ್ತು.

ಆದರೆ ತಮಿಳುನಾಡು, 6,500 ಕ್ಯೂಸೆಕ್ ಬಾಕಿಯನ್ನು ಒಳಗೊಂಡಂತೆ ಮುಂದಿನ 15 ದಿನಗಳವರೆಗೆ ಒಟ್ಟು 12,500 ಕ್ಯೂಸೆಕ್ ನೀರನ್ನು ತನ್ನ ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು

ಪ್ರಸ್ತುತ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶಿಸಿದ್ದು ಇದು ಕರ್ನಾಟಕವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

Related Articles

ಇತ್ತೀಚಿನ ಸುದ್ದಿಗಳು