Monday, November 4, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಘೋಷಣೆ, ಒಟ್ಟಾರೆ 36 ಮಂದಿಗೆ ಪ್ರಶಸ್ತಿ ಗೌರವ

ಪ್ರತಿ ವರ್ಷದಂತೆ ಈ ವರ್ಷವೂ ಸಹ ಕರ್ನಾಟಕ ಜಾನಪದ ಅಕಾಡೆಮಿಯು (Janapada Academy) ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2023 ರ ಸಾಲಿನಲ್ಲಿ 30 ಜಿಲ್ಲೆಗಳಿಂದ ಆಯ್ದಂತೆ 30 ಹಿರಿಯ ಜಾನಪದ ಕಲಾವಿದರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದರ ಜೊತೆಗೆ ಇಬ್ಬರು ಕಲಾವಿದರನ್ನು ಜಾನಪದ ತಜ್ಞ ಪ್ರಶಸ್ತಿಗೆ ಮತ್ತು ಜಾನಪದ ಪುಸ್ತಕ ತಜ್ಞ ಪ್ರಶಸ್ತಿಗೆ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.

ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯ ಮೊತ್ತ ರೂ.25,000/- ಇಬ್ಬರು ಕ್ಷೇತ್ರ ತಜ್ಞರಿಗೆ ತಲಾ ರೂ.50,000/-ಗಳು ಹಾಗೂ ಪುಸ್ತಕ ಬಹುಮಾನಿತರಿಗೆ ತಲಾ ರೂ.25,000/- ಗಳ ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ದಿನಾಂಕ:24-06-2024 ರಂದು ಬೆಂಗಳೂರಿನಲ್ಲಿ ನಡೆದ ಸರ್ವಸದಸ್ಯರ ಸಭೆಯ ತೀರ್ಮಾನದಂತೆ ಈ ಕೆಳಕಂಡ ಜಾನಪದ ಕಲಾವಿದರು ಮತ್ತು ತಜ್ಞರನ್ನು 2023 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page