Friday, June 14, 2024

ಸತ್ಯ | ನ್ಯಾಯ |ಧರ್ಮ

ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನ ನೀತಿಯನ್ನು ರೂಪಿಸಲಿದೆ ಕರ್ನಾಟಕ ಸರ್ಕಾರ

ಬೆಂಗಳೂರು: ಉದಾತ್ತ ಉದ್ದೇಶಕ್ಕಾಗಿ ಜನರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರವು ತಮಿಳುನಾಡು ರಾಜ್ಯದ ಮಾದರಿಯಲ್ಲಿ ಅಂಗಾಂಗ ದಾನದ ನೀತಿಯನ್ನು ರೂಪಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಇಲ್ಲಿ ಹೇಳಿದರು.

ಸಚಿವರ ಪ್ರಕಾರ, “ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೆ ಮತ್ತು ಸಂಪೂರ್ಣವಾಗಿ ಮಾನವೀಯ ಆಧಾರದ ಮೇಲೆ ಅಂಗಾಂಗ ದಾನಕ್ಕೆ ಅನುಕೂಲ ಮಾಡಿಕೊಡುವ ಕುಟುಂಬಗಳು ಮತ್ತು ವ್ಯಕ್ತಿಗಳನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.”

ದಾನಿಗಳ ಅಂತಿಮ ಸಂಸ್ಕಾರವನ್ನು ತಮಿಳುನಾಡು ಮಾದರಿಯಲ್ಲಿ ಗುರುತಿಸಿ ಅವರನ್ನು ಪೂರ್ಣ ಸರ್ಕಾರಿ ಗೌರವದೊಂದಿಗೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.

ಈ ನೀತಿಯಡಿ ಅಂಗಾಂಗ ದಾನ ಮಾಡಿದ ವ್ಯಕ್ತಿಗೆ ಅಥವಾ ವ್ಯಕ್ತಿಯ ಕುಟುಂಬಕ್ಕೆ ಪ್ರಮಾಣ ಪತ್ರವನ್ನೂ ನೀಡಲಾಗುವುದು ಎಂದು ಅವರು ತಿಳಿಸಿದರು.

“ಈ ಹಿನ್ನೆಲೆಯಲ್ಲಿ ಸರ್ಕಾರವು ಈ ಕುರಿತು ನೀತಿಯನ್ನು ರಚಿಸಿ ಅಂಗಾಗ ದಾನದ ಮಹತ್ವವನ್ನುಎತ್ತಿ ಹಿಡಿದು ಜನರ ನಡುವೆ ಪ್ರಚಾರ ಮಾಡಲಿದೆ” ಎಂದು ಸಚಿವರು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು