Thursday, August 22, 2024

ಸತ್ಯ | ನ್ಯಾಯ |ಧರ್ಮ

ಆಗಸ್ಟ್ 29ರವರೆಗೆ ತನ್ನೆಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ರಾಜ್ಯಪಾಲರು; ಭದ್ರತೆ ಹೆಚ್ಚಳ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ರಾಜ್ಯಪಾಲರ ಕಚೇರಿ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್‌ ಅವರಿಗೆ ಭದ್ರತೆಯನ್ನು ಬಲಪಡಿಸಲಾಗಿದೆ, ಬುಧವಾರ ರಾಜ್ಯಪಾಲರು ತಮಗಾಗಿ ಬುಲೆಟ್‌ಪ್ರೂಫ್ ಕಾರನ್ನು ತರಿಸಿಕೊಂಡಿದ್ದಾರೆ.

ಇದಲ್ಲದೆ, ರಾಜ್ಯಪಾಲರು ಆಗಸ್ಟ್ 29ರವರೆಗಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಮತ್ತು ಸಚಿವರ ನೇತೃತ್ವದಲ್ಲಿ ಪ್ರತಿಭಟನೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಲೇ ಇವೆ.

ಗುಪ್ತಚರ ಸಂಸ್ಥೆಗಳ ಮಾಹಿತಿಯ ಮೇರೆಗೆ ರಾಜಭವನದ ಹೊರಗಿನ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ ಗೆಹ್ಲೋಟ್, ಬುಧವಾರ ನಡೆದ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗಿದ್ದರು.

“ನೃಪತುಂಗ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಒಂದು ವಿಭಾಗವು ಪ್ರತಿಭಟಿಸಲು ಬಯಸಿದೆ ಎಂದು ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಅವರು ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದರು ಎಂದು ಪತ್ರಿಕೆಯೊಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ರಾಜ್ಯಪಾಲರು ಝಡ್‌ ಪ್ಲಸ್‌ ಭದ್ರತೆಗೆ ಅರ್ಹರಾಗಿದ್ದು, ಅದರಡಿ ಬುಲೆಟ್‌ ಪ್ರೂಫ್‌ ಕಾರ್‌ ಕೂಡಾ ಬರುತ್ತದೆ. ಆದರೆ ರಾಜ್ಯಪಾಲರು ಕಚೇರಿಯನ್ನು ವಹಿಸಿಕೊಂಡಾಗಿನಿಂದ ಈ ಸೌಲಭ್ಯವನ್ನು ಬಳಸಿರಲಿಲ್ಲ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page