Tuesday, November 12, 2024

ಸತ್ಯ | ನ್ಯಾಯ |ಧರ್ಮ

ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ – ಸಿಎಮ್‌ ಮಾಧ್ಯಮ ಕಚೇರಿ ಸ್ಪಷ್ಟನೆ

ಇಂದು ಮತ್ತು ನಿನ್ನೆ ಹಲವು ಮಾಧ್ಯಮಗಳಲ್ಲಿ ಮುಸ್ಲಿಮರಿಗೆ ಕಾಮಗಾರಿ ಗುತ್ತಿಗಳಲ್ಲಿ ಮೀಸಲಾತಿ ನೀಡುವ ಕುರಿತು ಸರ್ಕಾರ ಯೋಚಿಸುತ್ತಿದೆ ಎಂದು ವರದಿಯಾಗಿತ್ತು. ಆದರೆ ಅಂತ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿಯವರ ಮಾಧ್ಯಮ ಕಚೇರಿಯ ಪ್ರಕಟಣೆ ಸ್ಪಷ್ಟಪಡಿಸಿದೆ.

1 ಕೋಟಿ ರೂ.ವರೆಗಿನ ನಿರ್ಮಾಣ (ಸಿವಿಲ್) ಕಾಮಗಾರಿಗಳಿಗೆ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆಯನ್ನು ಸಿದ್ದರಾಮಯ್ಯ ಆಡಳಿತ ಪರಿಶೀಲಿಸುತ್ತಿದೆ ಕರ್ನಾಟಕದ ಪ್ರಮುಖ ಪತ್ರಿಕೆಗಳಲ್ಲಿ ವರದಿಯಾಗಿತ್ತು.

ತಮ್ಮ ಮೊದಲ ಅಧಿಕಾರಾವಧಿಯಲ್ಲಿ, ಸಿದ್ದರಾಮಯ್ಯನವರು ಎಸ್‌ಸಿ/ಎಸ್‌ಟಿಗಳಿಗೆ ಗುತ್ತಿಗೆಯಲ್ಲಿ ಮೀಸಲಾತಿಯನ್ನು ಪರಿಚಯಿಸಿದ್ದರು ಮತ್ತು ಈ ವರ್ಷದ ಆರಂಭದಲ್ಲಿ ಎರಡು ಒಬಿಸಿ ವರ್ಗಗಗಳಿಗೂ ಈ ಪ್ರಯೋಜನವನ್ನು ವಿಸ್ತರಿಸಲಾಗಿತ್ತು.

ಈ ನಡುವೆ ಮುಸ್ಲಿಂ ಸಮುದಾಯದಿಂದಲೂ ಮೀಸಲಾತಿಯ ಬೇಡಿಕೆ ಬಂದಿತ್ತು. ಆದರೆ ಮುಖ್ಯಮಂತ್ರಿಯವರ ಮಾಧ್ಯಮ ಕಚೇರಿಯು ಸದ್ಯಕ್ಕೆ ಅಂತಹ ಮೀಸಲಾತಿಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕಚೇರಿಯು “ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ” ಎಂದು ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page