ಆರ್‌ಎಸ್‌ಎಸ್ ಸಂಘಟನೆಯ ಇತಿಹಾಸ ಅಧ್ಯಯನ ಮಾಡಿದ ನಂತರ ಅದನ್ನು ಕಾನೂನಿಡಿ ತರುವ ಕೆಲಸ ಶುರು ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ಮುಂದಿನ ಕ್ರಮವನ್ನು ಕೈಗೊಳ್ಳುವ ಮುನ್ನ ಕರ್ನಾಟಕ ಸರ್ಕಾರವು ಆ ಸಂಘಟನೆಯ ನೂರು ವರ್ಷಗಳ ಇತಿಹಾಸವನ್ನು ವಿವರವಾಗಿ ಅಧ್ಯಯನ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಆರ್‌ಎಸ್‌ಎಸ್ ಸಂಘಟನೆಯನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ತರಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಅವರು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಸ್ಪಷ್ಟಪಡಿಸಿದ್ದಾರೆ.

ಆರ್‌ಎಸ್‌ಎಸ್ ನೋಂದಣಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ತಾವ ಬರೆದಿದ್ದ ಪತ್ರಕ್ಕೆ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಂದ ಯಾವುದೇ ಪ್ರತ್ಯುತ್ತರ ಬಂದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಅವರಿಂದ ಯಾವುದೇ ಉತ್ತರ ಬರುವುದಿಲ್ಲ ಎಂಬುದು ತಮಗೆ ಮೊದಲೇ ತಿಳಿದಿತ್ತು ಎಂದಿದ್ದಾರೆ. ಆರ್‌ಎಸ್‌ಎಸ್ ಸದ್ಯ ಕಾನೂನಿನ ವ್ಯಾಪ್ತಿಯಿಂದ ಹೊರಗಿದ್ದು, ಸರ್ಕಾರವು ಅವರನ್ನು ಕಾನೂನಿನ ಚೌಕಟ್ಟಿಗೆ ತರುವ ಕೆಲಸ ಮಾಡಲಿದೆ ಎಂದು ಅವರು ಪ್ರತಿಪಾದಿಸಿದರು.

ತಮ್ಮ ಪತ್ರಕ್ಕೆ ಆರ್‌ಎಸ್‌ಎಸ್ ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ ಸರ್ಕಾರವು ತನ್ನ ಮುಂದಿನ ಯೋಜನೆಗಳಂತೆ ಕಾನೂನುಬದ್ಧ ಕ್ರಮಗಳನ್ನು ಮುಂದುವರಿಸಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. “ಆರ್‌ಎಸ್‌ಎಸ್‌ನ 100 ವರ್ಷಗಳ ಇತಿಹಾಸವನ್ನು ನಾವು ಸರಿಯಾಗಿ ಅರ್ಥೈಸಿಕೊಳ್ಳಬೇಕಿದೆ. ಆರ್‌ಎಸ್‌ಎಸ್ ಸ್ವತಃ ನೋಂದಾಯಿತ ಸಂಸ್ಥೆಯಲ್ಲದಿದ್ದರೂ ಇತರರಿಗೆ ದೇಶಭಕ್ತಿ ಅಥವಾ ದೇಶದ್ರೋಹದ ಪ್ರಮಾಣಪತ್ರ ನೀಡುವ ಅಧಿಕಾರ ಅವರಿಗೆ ಎಲ್ಲಿದೆ?” ಎಂದು ಪ್ರಶ್ನಿಸುವ ಮೂಲಕ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು