Thursday, June 20, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು : ಹೆಚ್‌ಡಿಕೆ

ಬೆಂಗಳೂರು : ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ಸುಮಾರು 20000 ಹುದ್ದೆಗಳ ನೇಮಕ ಮಾಡಿಕೊಳ್ಳಲಿದ್ದು, ಆಯ್ಕೆಗೆಂದು ಪ್ರವೇಶ ಪರೀಕ್ಷೆ ನಡೆಸಲಿದೆ. ಪರೀಕ್ಷೆಯು ಕೇವಲ ಹಿಂದಿ ಮತ್ತು ಇಂಗ್ಲೀಷ್‌ ಭಾಷೆಯಲ್ಲಿ ಮಾತ್ರ ಇರುವುದರಿಂದ ಪರೀಕ್ಷೆ ಕನ್ನಡದಲ್ಲೂ ನಡೆಸಬೇಕು ಎಂದು ಹೆಚ್‌ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿದ ಹೆಚ್‌ಡಿಕೆ ʼಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?ʼ ಎಂದು ಪ್ರಶ್ನೆ ಮಾಡಿದ್ದಾರೆ.

ʼಕೇಂದ್ರ ಬಿಜೆಪಿ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆʼ ಎಂದು ಸರ್ಕಾರದ ಮೇಲೆ ಅಸಮಾಧಾನ

ʼಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು. ಈ ವಿಷಯದಲ್ಲಿ ನಮ್ಮ ಎರಡು ಬೇಡಿಕೆಗಳಿವೆ. 1.ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. 2.ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು.ʼ ಎಂದು ಹೆಚ್‌ಡಿ ಕೆ ತಮ್ಮ ಬೇಡಿಕೆಗಳನ್ನು ಹೊಡ್ಡಿದ್ದಾರೆ.

ʼಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು. ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ.ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ.ʼ ಎಂದು ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯವಾಗಬಾರದೆಂಬ ನಿಟ್ಟಿನಲ್ಲಿ ಮಾತನಾಡಿದ್ದಾರೆ.

ಇದನ್ನೂ ನೋಡಿ : ಚೋಳರ ಕಾಲದಲ್ಲಿ ಹಿಂದೂ ಧರ್ಮ ಇರಲಿಲ್ಲ, ಬ್ರಿಟಿಷರೇ ಹಿಂದೂ ಎಂಬ ಪದವನ್ನು ಹುಟ್ಟುಹಾಕಿದ್ದು: ಕಮಲ್ ಹಾಸನ್

Related Articles

ಇತ್ತೀಚಿನ ಸುದ್ದಿಗಳು