Home ಇನ್ನಷ್ಟು ಕೋರ್ಟು - ಕಾನೂನು ಪೊಲೀಸ್ ಮತ್ತು ನ್ಯಾಯಾಂಗ ಸುವ್ಯವಸ್ಥೆಯಲ್ಲಿ ದೇಶದಲ್ಲಿ ಕರ್ನಾಟಕವೇ ನಂ 1; “ಐಜಿಆರ್ 2025” ವರದಿ

ಪೊಲೀಸ್ ಮತ್ತು ನ್ಯಾಯಾಂಗ ಸುವ್ಯವಸ್ಥೆಯಲ್ಲಿ ದೇಶದಲ್ಲಿ ಕರ್ನಾಟಕವೇ ನಂ 1; “ಐಜಿಆರ್ 2025” ವರದಿ

0

ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕ ರಾಜ್ಯ ಅಗ್ರಸ್ಥಾನ ಪಡೆದಿದೆ. ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ ನಡೆದ ವರದಿಯಲ್ಲಿ ಈ ಮಾಹಿತಿ ಲಭ್ಯವಾಗಿದೆ. ಈ ವರದಿಯ ಪ್ರಕಾರ ದಕ್ಷಿಣದ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆದಿದೆ. ಈ ವರದಿಯು ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ರಾಜ್ಯಗಳನ್ನು ಶ್ರೇಣೀಕರಿಸುತ್ತದೆ.

ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ಹಿಂದುಳಿದಿವೆ ಎಂದು ವರದಿ ಹೇಳಿದೆ. ಕರ್ನಾಟಕದ ನಂತರ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ.

ಹಿಂದಿನ ವರ್ಷವೂ ಅಗ್ರಸ್ಥಾನ ಪಡೆದಿದ್ದ ಕರ್ನಾಟಕ ಈ ವರ್ಷವೂ ತನ್ನ ಶ್ರೇಯಾಂಕವನ್ನು ಉಳಿಸಿಕೊಂಡಿದೆ. ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ಸ್ಥಾನ ಪಡೆದಿದೆ.

ಇನ್ನು ಕಳೆದ ವರ್ಷ ಐದನೇ ಸ್ಥಾನ ಪಡೆದಿದ್ದ ದಕ್ಷಿಣದ ಇನ್ನೊಂದು ರಾಜ್ಯ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. 2019 ರಲ್ಲಿ ಹನ್ನೊಂದನೇ ಸ್ಥಾನ ಪಡೆದಿದ್ದ ತೆಲಂಗಾಣ ತನ್ನ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ.

ಇನ್ನು ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ರ್ಯಾಂಕಿಂಗ್ ಪ್ರಕಟಿಸಲಾಗಿದೆ. ಕರ್ನಾಟಕ ಕಳೆದ ವರ್ಷವೂ ಅಗ್ರ ಸ್ಥಾನ ಗಳಿಸಿದ್ದು, ಈ ವರ್ಷ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

You cannot copy content of this page

Exit mobile version