Home ಬೆಂಗಳೂರು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಬಿಜೆಪಿ vs ಬಿಜೆಪಿ ಜಟಾಪಟಿ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಬಿಜೆಪಿ vs ಬಿಜೆಪಿ ಜಟಾಪಟಿ

0

ಬೆಂಗಳೂರು: ದಶಕಗಳಷ್ಟು ಹಳೆಯದಾದ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಈಗ ಮತ್ತೆ ಮುನ್ನೆಲೆಗೆ ಬರುತ್ತಿರುವುದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಭಾರತೀಯ ಜನತಾ ಪಕ್ಷಗಳು (ಬಿಜೆಪಿ) ಮತ್ತೆ ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿವೆ.

ಎರಡೂ ರಾಜ್ಯ ಸರ್ಕಾರಗಳು ಪ್ರಾದೇಶಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುವಾಗ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ಷ್ಮ ರಾಜಕೀಯ ವಿಷಯದ ಬಗ್ಗೆ ಬಲವಾದ ಮಾತುಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರದ ಯಾವುದೇ ಗ್ರಾಮವು ಇತ್ತೀಚೆಗೆ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿಲ್ಲ ಮತ್ತು ಯಾವುದೇ ಗಡಿ ಗ್ರಾಮವು ʼಎಲ್ಲಿಗೂ ಹೋಗುವʼ ಪ್ರಶ್ನೆಯೇ ಇಲ್ಲ ಎಂದು ಫಡ್ನವೀಸ್ ಬುಧವಾರ ಹೇಳಿದ್ದರು. ಮಹಾರಾಷ್ಟ್ರ ಬಿಜೆಪಿ ನಾಯಕನ ಹೇಳಿಕೆಯನ್ನು ʼಪ್ರಚೋದನಕಾರಿʼ ಎಂದು ಬಣ್ಣಿಸಿದ ಬಸವರಾಜ ಬೊಮ್ಮಾಯಿಯವರು, ʼಅವರ ಕನಸು ಎಂದಿಗೂ ನನಸಾಗುವುದಿಲ್ಲʼಎಂದು ತಿರುಗೇಟು ನೀಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಕನ್ನಡ ಭಾಷಿಕರನ್ನು ಹೊಂದಿರುವ ಮಹಾರಾಷ್ಟ್ರದ ಸೋಲಾಪುರದಂತಹ ಪ್ರದೇಶಗಳನ್ನು ಕರ್ನಾಟಕದ ಭಾಗವನ್ನಾಗಿ ಮಾಡಬೇಕು ಎಂಬುದು ಕರ್ನಾಟಕದ ಬೇಡಿಕೆಯಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಈ ಹಿಂದೆ ನಿರ್ಣಯಿಸಿದ್ದವು. ಈ ಕಾರಣ ಕರ್ನಾಟಕ ಸರ್ಕಾರವು ಅವರಿಗೆ ಸಹಾಯ ಮಾಡಲು ಯೋಜನೆಗಳನ್ನು ಯೋಜಿಸಿದೆ ಮತ್ತು ಮಹರಾಷ್ಟ್ರ ಸರ್ಕಾರವು ಅವರ ವಿಲೀನದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿಯವರ ಹೇಳಿಕೆಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಫಡ್ನವೀಸ್, ಈ ಗ್ರಾಮಗಳು 2012 ರಲ್ಲಿ ನೀರಿನ ಬಿಕ್ಕಟ್ಟಿನ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದ್ದವು, ಆದರೆ ಇತ್ತೀಚಿನ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದು ಹೇಳಿದರು.

ತಮ್ಮ ನೇತೃತ್ವದ ಹಿಂದಿನ ಮಹಾರಾಷ್ಟ್ರ ಸರ್ಕಾರವು ಸಮಸ್ಯೆಯನ್ನು ಪರಿಹರಿಸಲು ಕರ್ನಾಟಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಗ್ರಾಮಗಳಿಗೆ ನೀರು ಸರಬರಾಜು ಯೋಜನೆಯನ್ನು ಸಹ ರೂಪಿಸಲಾಗಿದೆ ಎಂದು ಸಹ ಅವರು ಹೇಳಿದ್ದಾರೆ. ʼನಾವು ಈಗ ಆ ಯೋಜನೆಯನ್ನು ಅನುಮೋದಿಸಲಿದ್ದೇವೆ. ಬಹುಶಃ ಕೋವಿಡ್ ಕಾರಣದಿಂದಾಗಿ, ಹಿಂದಿನ (ಉದ್ಧವ್ ಠಾಕ್ರೆ ನೇತೃತ್ವದ) ಸರ್ಕಾರವು ಅದನ್ನು ಅನುಮೋದಿಸಲು ಸಾಧ್ಯವಾಗಲಿಲ್ಲʼ ಎಂದು ಫಡ್ನವೀಸ್ ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್ಸಿಪಿಯೊಂದಿಗಿನ ಮೈತ್ರಿಯ ಬಗ್ಗೆ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಣದೊಂದಿಗೆ ಬಿಜೆಪಿ ಜೂನ್‌ನಲ್ಲಿ ಮತ್ತೆ ಅಧಿಕಾರಕ್ಕೆ ಮರಳಿತು.

ಕರ್ನಾಟಕವು ರಾಜ್ಯದ ಗಡಿಗೆ ಹತ್ತಿರವಿರುವ ಮತ್ತು ಕನ್ನಡ ಮಾತನಾಡುವ ಪ್ರದೇಶಗಳನ್ನು ಕರ್ನಾಟದ ಭಾಗವನ್ನಾಗಿ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ಜಿಲ್ಲೆ ಮತ್ತು ಕರ್ನಾಟಕದ ಇತರ ಮರಾಠಿ ಬಹುಸಂಖ್ಯಾತ ಪ್ರದೇಶಗಳ ವಿವಾದವನ್ನು ಪರಿಹರಿಸಲು ಒತ್ತಾಯಿಸುತ್ತಿದೆ.

2004 ರಲ್ಲಿ ಅಂದಿನ ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ನಗರ ಮತ್ತು 865 ಗ್ರಾಮಗಳನ್ನು ವಶಪಡಿಸಿಕೊಂಡಾಗ ಈ ವಿಷಯವು ಸುಪ್ರೀಂ ಕೋರ್ಟ್‌ಗೆ ತಲುಪಿತು. ಆದರೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಈ ಪ್ರಕರಣ ಇನ್ನೂ ಬಾಕಿ ಇದೆ ಎನ್ನಲಾಗಿದೆ.

ಇತ್ತೀಚೆಗೆ, ಮಹಾರಾಷ್ಟ್ರ  ಸರ್ಕಾರವು ಎಲ್ಲಾ ಪಕ್ಷಗಳ ನಾಯಕರನ್ನು ಒಳಗೊಂಡ 19 ಸದಸ್ಯರ ಸಮಿತಿಯು ಸಭೆ ಸೇರಿ, ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ನಿರ್ಧರಿಸಿತು. ಈ ಹಿನ್ನಲೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಈ ವಿಷಯವನ್ನು ಮೇಲ್ವಿಚಾರಣೆ ಮಾಡಲು ಇಬ್ಬರು ಹಿರಿಯ ಸಚಿವರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.

ಅದರಂತೆ ಗಡಿ ವಿವಾದವು ಸುಪ್ರೀಂ ಕೋರ್ಟಿನಲ್ಲಿ ಬಂದಾಗ ಅದನ್ನು ನಿಭಾಯಿಸಲು ರಾಜ್ಯ ಸರ್ಕಾರವು ಪ್ರಬಲ ಕಾನೂನು ತಂಡವನ್ನು ರಚಿಸಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

You cannot copy content of this page

Exit mobile version