Wednesday, June 18, 2025

ಸತ್ಯ | ನ್ಯಾಯ |ಧರ್ಮ

ನಾಳೆ ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಫಲಿತಾಂಶ

ನವದೆಹಲಿ: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಣಿವಾರ ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರುವಾಗಲಿದೆ.

ಶನಿವಾರ ಬೆಳಗ್ಗೆ 8 ಗಂಟೆಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆಯ ಚುನಾವಣೆ ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರಕ್ಕೆ ನವೆಂಬರ್‌ 20ರಂದು ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಜಾರ್ಖಂಡ್‌ ರಾಜ್ಯದಲ್ಲಿ ನವೆಂಬರ್‌ 13 ಮತ್ತು 20ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು.

ಕೇರಳದ ವಯನಾಡು ಮತ್ತು ಮಹಾರಾಷ್ಟ್ರದ ನಾಂದೆಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡಿರುವುದರಿಂದ ಈ ಕ್ಷೇತ್ರ ಗಮನ ಸೆಳೆದಿದೆ.

ದೇಶದ 14 ರಾಜ್ಯಗಳಲ್ಲಿನ 48 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಸಹ ನಾಳೆ ನಡೆಯಲಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳು ಇದರಲ್ಲಿ ಸೇರಿವೆ.

ಉತ್ತರಪ್ರದೇಶ 9, ರಾಜಸ್ಥಾನ 7, ಪಶ್ಚಿಮ ಬಂಗಾಳ 6, ಅಸ್ಸಾಂ 5, ಬಿಹಾರ 4, ಪಂಜಾಂಬ್‌ 4, ಕರ್ನಾಟಕ 3, ಕೇರಳ 2, ಮಧ್ಯಪ್ರದೇಶ 2, ಸಿಕ್ಕಿಂ 2 ಹಾಗೂ ಛತ್ತೀಸ್‌ಗಢ, ಗುಜರಾತ್, ಮೇಘಾಲಯ, ಉತ್ತರಾಖಂಡ್‌ ರಾಜ್ಯಗಳ ತಲಾ ಒಂದು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page