ಎಸ್‌ಡಿಪಿಐ, ಪಿಎಫ್‌ಐ ಕಾರ್ಯಕರ್ತರ ನಿವಾಸಗಳ ಮೇಲೆ ಕರ್ನಾಟಕ ಪೊಲೀಸರ ದಾಳಿ: 5 ಮಂದಿ ವಶ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ನಿವಾಸಗಳ ಮೇಲೆ ಕರ್ನಾಟಕ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಪಣಂಬೂರು, ಸುರತ್ಕಲ್, ಉಳ್ಳಾಲ ಮತ್ತು ಮಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದ್ದು, ಐವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಈ ಹಿನ್ನೆಯಲ್ಲಿ, ನಿಷೇಧಾಜ್ಞೆ ಜಾರಿಯಾದ ನಂತರ ರಾಜ್ಯದಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ನಡೆದ ಮೊದಲ ದಾಳಿ ಇದಾಗಿದೆ.

ಮೂಲಗಳ ಪ್ರಕಾರ, ಪೊಲೀಸರು ವಶಕ್ಕೆ ಪಡಿಸಿಕೊಂಡಿರುವ ಎಲ್ಲಾ ವ್ಯಕ್ತಿಗಳು ನಿಷೇಧಿತ PFI ಗೆ ಸೇರಿದವರು ಎಂದು ತಿಳಿದು ಬಂದಿದೆ. ಪೊಲೀಸರು ಐಪಿಸಿ ಸೆಕ್ಷನ್ 121 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, UAPA ಕಾನೂನಿನ ಅಡಿಯಲ್ಲೂ ಕ್ರಮ ಕೈಗೊಂಡಿದ್ದಾರೆ.

ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳು ವಿಧ್ವಂಸಕ ಚಟುವಟಿಕೆಗಳು ಮತ್ತು ದೇಶವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿವೆ ಎಂದು ಆರೋಪಿಸಲಾಗಿದ್ದು, ಕರ್ನಾಟಕದ ಆಡಳಿತಾರೂಢ ಬಿಜೆಪಿ ನಾಯಕರು ಎಸ್‌ಡಿಪಿಐ ಎರಡನ್ನೂ ನಿಷೇಧಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ಕುಮಾರ್ ನೆತ್ತಾರೆ ಹತ್ಯೆ ಪ್ರಕರಣ ಹಾಗೂ ಕರ್ನಾಟಕ ಸರ್ಕಾರ ಪಿಎಫ್‌ಐ ಮೇಲೆ ನಿಷೇಧ ಹೇರುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸಿತ್ತು. ಹೀಗಾಗಿ ಕೇಂದ್ರ ಸರ್ಕಾರ ಭಾರತದಲ್ಲಿ 5 ವರ್ಷಗಳ ಕಾಲ ಪಿಎಫ್‌ಐ ಅನ್ನು ನೀಷೇಧಿಸಿದೆ.

Related Articles

ಇತ್ತೀಚಿನ ಸುದ್ದಿಗಳು