ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಸ್‌ಐಆರ್ ಕರ್ತವ್ಯದ ವೇಳೆ ಮೃತ ವೇಳೆ ಮೃತಪಟ್ಟ ಭುವನಾ ಕುಟುಂಬಕ್ಕೆ ₹1 ಕೋಟಿ ವಿಮೆ, ಸರ್ಕಾರಿ ನೌಕರಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಎಸ್‌ಐಆರ್ ಕರ್ತವ್ಯದ ವೇಳೆ ಮೃತ ವೇಳೆ ಮೃತಪಟ್ಟ ಭುವನಾ ಕುಟುಂಬಕ್ಕೆ ₹1 ಕೋಟಿ ವಿಮೆ, ಸರ್ಕಾರಿ ನೌಕರಿ

ತುಮಕೂರು : ಎಸ್‌ಐಆರ್ (SIR) ಕರ್ತವ್ಯದ ನಿಮಿತ್ತ ಮನೆ ಮನೆ ಸಮೀಕ್ಷೆಗೆ ತೆರಳುತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ (VA) ಭುವನಾ ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆಯಾಗಿದೆ. ಕಂದಾಯ ನೌಕರರ ಸಂಘದ ತೀವ್ರ ಪ್ರತಿಭಟನೆಯ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ (G Parameshwar)  ಅವರು ಮೃತರ ಕುಟುಂಬಕ್ಕೆ ಭರಪೂರ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಮೃತ ಭುವನಾ ಅವರು ಎಸ್‌ಐಆರ್‌ನ ಬಿಎಲ್‌ಒ (BLO) ಸೂಪರ್‌ವೈಸರ್ ಆಗಿ ನಿಯೋಜನೆಗೊಂಡಿದ್ದರು. ಗೂಳೂರು ಹೋಬಳಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಮನೆ ಮನೆ ಸಮೀಕ್ಷೆ ನಡೆಸಲು ತೆರಳುತ್ತಿದ್ದಾಗ ದುರದೃಷ್ಟವಶಾತ್ ಭೀಕರ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂದಾಯ ಸಚಿವರು ನೀಡಿದ ಪ್ರಮುಖ ಭರವಸೆಗಳು:
ಭುವನಾ ಅವರ ನಿಧನಕ್ಕೆ ನ್ಯಾಯ ಸಿಗಬೇಕು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಂದಾಯ ನೌಕರರ ಸಂಘವು ಬೃಹತ್ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್, ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಮೃತ ಅಧಿಕಾರಿಯ ಕುಟುಂಬಕ್ಕೆ ಮುಂದಿನ 15 ದಿನಗಳ ಒಳಗಾಗಿ 1 ಕೋಟಿ ರೂಪಾಯಿ ವಿಮಾ ಮೊತ್ತ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು. ಭುವನಾ ಅವರ ಕುಟುಂಬದ ಸದ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲು ತಕ್ಷಣವೇ ಕ್ರಮ ವಹಿಸಲಾಗುವುದು. ಅವರು ಚುನಾವಣಾ ಕರ್ತವ್ಯದಲ್ಲಿದ್ದ ಕಾರಣ, ಚುನಾವಣಾ ಆಯೋಗದಿಂದ ಹೆಚ್ಚುವರಿಯಾಗಿ 30 ಲಕ್ಷ ರೂ. ಮಂಜೂರು ಮಾಡಿಸಿಕೊಡುವುದಾಗಿ ಸಚಿವರು ಸ್ಪಷ್ಟಪಡಿಸಿದರು.

ಪ್ರತಿಭಟನೆ ಹಿಂಪಡೆದ ನೌಕರರು:
ಸರ್ಕಾರದ ವತಿಯಿಂದ ಸಚಿವರು ಇಷ್ಟೂ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಂದಾಯ ನೌಕರರ ಸಂಘವು ತನ್ನ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆದಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು