ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್ ಅಹ್ಮದ್ ಖಾನ್

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್ ಅಹ್ಮದ್ ಖಾನ್

ಬಳ್ಳಾರಿ,ಅ.09 : ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.
ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸಲುವಾಗಿ ಕಂಪ್ಲಿ ಪಟ್ಟಣದ ಎಸ್.ಎನ್.ಪೇಟೆ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರವು ಸರ್ವರಿಗೂ ಸೂರು ಸಿಗಲಿ ಎಂಬ ಉದ್ದೇಶ ಹೊಂದಿದೆ. ಈ ಹಿಂದೆ ವಿವಿಧ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನವಿದ್ದು, ಫೆಬ್ರವರಿ ತಿಂಗಳಲ್ಲಿ ಹಂತ ಹಂತವಾಗಿ ಮನೆ ವಿತರಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಇಲಾಖೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅನುದಾನದ ಕೊರತೆ ಇಲ್ಲ. ಅದೇರೀತಿಯಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ. ಬಡಜನರ ಕಲ್ಯಾಣಕ್ಕಾಗಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.
ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ 3200 ಕೋಟಿ ರೂ. ನೀಡಲಾಗಿದೆ. ಈ ಪೈಕಿ 1620 ಕೋಟಿ ರೂ. ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಹಲವು ವರ್ಷಗಳಿಂದ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ದೊರೆಯುತ್ತಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಆಶಾಭಾವನೆಯಿಂದ ನನ್ನ ಕ್ಷೇತ್ರದ ಅಭಿವೃದ್ಧಿಗೆ 100 ರೂ. ಕೋಟಿ ನೀಡಿದ್ದಾರೆ. ಜನಪರ ಕಲ್ಯಾಣ ಯೋಜನೆಗಳನ್ನು ಕೈಗೊಂಡು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಡಿ ಅನುದಾನ ಹಂಚಿಕೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತ ಸಮಗ್ರ ಚಿತ್ರಣ ವಿವರಿಸಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆಯಿದೆ ಎಂದು ಸುಳ್ಳು ಹೇಳುತ್ತಿದ್ದರು. ಆದರೆ ಈ ಭಾಗದ ಕಂಪ್ಲಿ ಶಾಸಕರ ಇಚ್ಛಾಶಕ್ತಿಯಿಂದ ಕ್ಷೇತ್ರದ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪಡೆದಿರುವ ಅನುದಾನವೇ ನಿದರ್ಶನವಾಗಿದೆ ಎಂದು ಸ್ಪಷ್ಟಪಡಿಸಿದರು.
ಶಾಸಕ ಗಣೇಶ್ ಅವರು, ಈ ಭಾಗದ ಜನರ, ರೈತರ ಪರ ಕಾಳಜಿ ಹೊಂದಿದವರು; ಹಾಗಾಗಿ ಅವರನ್ನು ಈ ಭಾಗದ ಭಗೀರಥ ಎಂದೇ ಕರೆಯುತ್ತಾರೆ ಎಂದು ಶಾಸಕ ಭರತ್ ರೆಡ್ಡಿ ಅವರು ವರ್ಣಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಡಿ ಆಯ್ಕೆಯಾದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆದೇಶ ಪತ್ರ, ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹುಮಾಯೂನ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಪ್ರಮೋದ್, ತಹಶೀಲ್ದಾರ ಶಿವರಾಜ, ಕಂಪ್ಲಿ ಮತ್ತು ಕುರುಗೋಡು ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು