ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟ್ರಾಫಿಕ್‌ ದಂಡದ ರಿಯಾಯತಿಯ 19 ಲಕ್ಷ ಕೇಸ್ ಕ್ಲೋಸ್ – 55 ಕೋಟಿ ಆದಾಯ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಟ್ರಾಫಿಕ್‌ ದಂಡದ ರಿಯಾಯತಿಯ 19 ಲಕ್ಷ ಕೇಸ್ ಕ್ಲೋಸ್ – 55 ಕೋಟಿ ಆದಾಯ

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವಿಶೇಷ ಪ್ರಯತ್ನದ ಫಲವಾಗಿ, ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಪಾವತಿಗೆ ಘೋಷಿಸಿದ್ದ ಶೇಕಡಾ 50 ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಈ ರಿಯಾಯಿತಿ ಯೋಜನೆಯಡಿ ಒಟ್ಟು 19,13,659 ಸಂಚಾರ ಚಲನ್ ಪ್ರಕರಣಗಳು ಇತ್ಯರ್ಥಗೊಂಡಿದ್ದು, ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 55 ಕೋಟಿ ರೂಪಾಯಿ ದಂಡದ ಆದಾಯ ಹರಿದುಬಂದಿದೆ. ಜುಲೈ 11 ರಂದು ರಾಜ್ಯಾದ್ಯಂತ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 78.79 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಇದರಲ್ಲಿ 2.54 ಲಕ್ಷ ಬಾಕಿ ಇದ್ದ ಪ್ರಕರಣಗಳು ಹಾಗೂ 76.25 ಲಕ್ಷ ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿವೆ. ಇಡೀ ಪ್ರಕ್ರಿಯೆಯಲ್ಲಿ ಒಟ್ಟು 3,017 ಕೋಟಿ ರೂಪಾಯಿಗಳಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಜೂನ್ 21 ರಿಂದ ಜುಲೈ 10 ರವರೆಗೆ 20 ದಿನಗಳವರೆಗೆ ಸಂಚಾರ ಚಲನ್‌ಗೆ ರಿಯಾಯಿತಿಯನ್ನು ನೀಡಲಾಯಿತು. ಲೋಕ ಅದಾಲತ್‌ನಲ್ಲಿ ಇತ್ಯರ್ಥವಾದ ಪ್ರಕರಣಗಳ ಅಂಕಿಅಂಶಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶೆ ಮತ್ತು ಕೆಎಸ್‌ಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷೆ ಅನು ಶಿವರಾಮನ್, ಸಾರಿಗೆ ಇಲಾಖೆಗೆ ಸಂಬಂಧಿಸಿದ 1,212 ಪ್ರಕರಣಗಳನ್ನು ವಿಲೇವಾರಿ ಮಾಡುವ ಮೂಲಕ 61.99 ಲಕ್ಷ ರೂ.ಗಳನ್ನು ವಸೂಲಿ ಮಾಡಲಾಗಿದೆ ಎಂದು ಹೇಳಿದರು. ಲೋಕ ಅದಾಲತ್‌ನ ಯಶಸ್ಸಿನ ಕಥೆಯನ್ನು ವಿವರಿಸುತ್ತಾ, ರಾಜ್ಯಾದ್ಯಂತ ಹಿರಿಯ ನಾಗರಿಕರಿಗೆ ಸಂಬಂಧಿಸಿದ 1,948 ಪ್ರಕರಣಗಳ ಇತ್ಯರ್ಥಕ್ಕೆ ಇದು ಸಹಾಯ ಮಾಡಿದೆ ಎಂದು ಹೇಳಿದರು. ಇದಲ್ಲದೆ, ಧಾರವಾಡ ಜಿಲ್ಲೆಯಲ್ಲಿ 2.45 ಕೋಟಿ ರೂ.ಗಳಿಗೆ ಮೋಟಾರು ವಾಹನ ಅಪಘಾತ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಒಟ್ಟಾರೆಯಾಗಿ, 2,776 ವೈವಾಹಿಕ ವಿವಾದಗಳು, 3,590 ಪಾರ್ಟಿಷನ್ ಮೊಕದ್ದಮೆಗಳು, 4,496 ಮೋಟಾರು ವಾಹನ ಅಪಘಾತ ಪ್ರಕರಣಗಳು, ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಕಾಯ್ದೆಯಡಿ 10,817 ಪ್ರಕರಣಗಳು, 155 ಗ್ರಾಹಕ ಪ್ರಕರಣಗಳು ಮತ್ತು 18 ರೇರಾ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ ಎಂದರು.

ವಿಶೇಷ ಲೋಕ ಅದಾಲತ್

ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯಡಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕಾಗಿ ಜುಲೈ 18 ರಂದು ವಿಶೇಷ ಲೋಕ ಅದಾಲತ್ ನಡೆಯಲಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು