ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 2000 ಕೋಟಿ ಅನುದಾನ ನೀಡಲಾಗಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 2000 ಕೋಟಿ ಅನುದಾನ ನೀಡಲಾಗಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಬಾದಾಮಿ ಕ್ಷೇತ್ರಕ್ಕೆ ಕಳೆದೆರಡು ವರ್ಷಗಳ್ಲಲಿ 2000 ಕೋಟಿ ಅನುದಾನ ನೀಡಲಾಗಿದ್ದು, ಬಾದಾಮಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಚಾಲುಕ್ಯ ಉತ್ಸವ -2026 ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ
ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು ಚಾಲುಕ್ಯ ಉತ್ಸವ ಹೊಂದಿದೆ. ಬಾದಾಮಿ ಐಹೊಳೆ ಪಟ್ಟದಕಲ್ಲುಗಳ ವೈಭವವನ್ನು ವೀಕ್ಷಿಸಲು ದೇಶವಿದೇಶಗಳಿಂದ ಜನರು ಬರುತ್ತಾರೆ. ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರವೂ ಸರ್ವಧರ್ಮಗಳ ಸಮನ್ವಯತೆಯನ್ನು ಪಾಲಿಸುತ್ತದೆ. ನಾನು ಮುಖ್ಯಮಂತ್ರಿಯಾಗಿ ಈ ಎರಡು ವರ್ಷದಲ್ಲಿ ಬಾದಾಮಿಕ್ಷೇತ್ರಕ್ಕೆ ಸುಮಾರು 2 ಸಾವಿರ ಕೋಟಿ ರೂ.ಗಳ ಅನುದಾನವನನ್ನು ನೀಡಿದ್ದೇನೆ. 1400 ಕೋಟಿ ರೂ.ಗಳ ಏತನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಅಲ್ಲದೇ 400 ಕೋಟಿ ರೂ.ಗಳಲ್ಲಿ ಬಾದಾಮಿಗೆ ಕುಡಿಯುವ ನೀರಿನ ಯೋಜನೆ, 50 ಕೋಟಿ ರೂ.ಗಳಲ್ಲಿ ರಸ್ತೆ ಯೋಜನೆ ಸೇರಿದಂತೆ ಹಲವು ಅಭಿವೃದ್ದಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ನಮ್ಮ ಪ್ರಣಾಳಿಕೆಯಲ್ಲಿ 590 ಭರವಸೆಗಳಲ್ಲಿ 240 ಈಡೇರಿಸಲಾಗಿದ್ದು, 5 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಬಾದಾಮಿ ಕ್ಷೇತ್ರದ ಜನರ ಉಪಕಾರವನ್ನು ಎಂದೂ ಮರೆಯುವುದಿಲ್ಲ
ಐದು ವರ್ಷಗಳ ಕಾಲ ಬಾದಾಮಿ ಕ್ಷೇತ್ರದ ಶಾಸಕ ನಾಗಿದ್ದೆ, 2018 ರಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಸ್ಪರ್ಧಿಸಿದ್ದು, ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲಾಯಿತು. ಆದರೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಗೆಲ್ಲಿಸಿದ್ದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಬಾದಾಮಿ ಕ್ಷೇತ್ರಕ್ಕೆ ಬಂದು ಎರಡು ಅಥವಾ ಮೂರು ಬಾರಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿ ಜನರ ಆಶೀರ್ವಾದ ಬೇಡಿರಬಹುದು. ಇಲ್ಲಿನ ಜನರು ದೊಡ್ಡ ಮನಸ್ಸು ಮಾಡಿ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದರಿಂದ ವರುಣಾ ಕ್ಷೇತ್ರದಲ್ಲಿ ಗೆದ್ದು ಮಂತ್ರಿಯಾಗಲು ಸಾಧ್ಯವಾಯಿತು ಎನ್ನುವುದನ್ನು ಮರೆಯಲಾಗುವುದಿಲ್ಲ. ನಿಮ್ಮ ಉಪಕಾರವನ್ನು ನಾನೆಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಶಾಸಕನಾಗಿದ್ದಾಗ ಉತ್ಸವ ನಡೆಯಲಿಲ್ಲ ಎನ್ನುವುದು ನೋವಿನ ಸಂಗತಿ
ಬಾದಾಮಿ ಶಾಸಕನಾಗಿದ್ದ ಸಂದರ್ಭದಲ್ಲಿ ಚಾಲುಕ್ಯ ಉತ್ಸವ ನಡೆಯಲಿಲ್ಲ ಹಾಗೂ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಯಾಗಲಿಲ್ಲ ಎನ್ನುವುದು ನೋವಿನ ಸಂಗತಿ. ಇಂದು ಭೀಮಸೇನಾ ಚಿಮ್ಮನಕಟ್ಟಿಯವರ ಒತ್ತಾಯದಿಂದ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಉತ್ಸವಕ್ಕೆ ಒಂದು ಕೋಟಿ ಹೆಚ್ಚುವರಿಯಾಗಿ ನೀಡಲಾಗುವುದು
ಈ ವರ್ಷ ಚಾಲುಕ್ಯ ಉತ್ಸವ ನಡೆಯಲೇಬೇಕೆಂದು ಈ ಭಾಗದ ಶಾಸಕರ ಒತ್ತಾಯದ ಮೇರೆಗೆ ಬಜೆಟ್ ನಲ್ಲಿಯೇ ಚಾಲುಕ್ಯ ಉತ್ಸವವನ್ನು ಘೋಷಣೆ ಮಾಡಲಾಯಿತು. ಮೂರು ಕೋಟಿ ರೂ ಗಳನ್ನೂ ಇದಕ್ಕಾಗಿ ಒದಗಿಸಲಾಗಿದೆ. ಉತ್ಸವಕ್ಕೆ ಒಂದು ಕೋಟಿ ರೂ ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದರು. ಇಮ್ಮಡಿ ಪುಲಕೇಶಿ ಪ್ರತಿಮೆ ಅನಾವರಣಕ್ಕೆ ಸರ್ಕಾರ ನೆರವು ಒದಗಿಸಲಿದೆ ಎಂದರು.

ಕೇಂದ್ರ ಸರ್ಕಾರದ ನೆರವಿಗೆ ಮನವಿ ಪತ್ರ
ಕೇಂದ್ರ ಸರ್ಕಾರದಿಂದ ನೆರವು ಒದಗಿಸುವುದಾಗಿ ಸಂಸದರು ತಿಳಿಸಿದ್ದು ಇದಕ್ಕೆ ಮನವಿ ಪತ್ರವನ್ನು ನಾಳೆಯೇ ಕೊಡಲಾಗುವುದು. ಕೇಂದ್ರ ಸರ್ಕಾರ ನಮ್ಮ ಮನವಿಗಳಿಗೆ ಹೋಗುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಇವರಿಗೆ ಮನವಿಯನ್ನು ನೀಡಿರಲಿಲ್ಲ ಎಂದರು. ರಾಜ್ಯದ ಮನವಿಗಳಿಗೆ ಕೇಂದ್ರ ಸರ್ಕಾರ ಕಿವಿಗೊಡುತ್ತಿಲ್ಲ. ರಾಜ್ಯಸರ್ಕಾರ ಸಧ್ಯದಲ್ಲಿಯೇ ಮನವಿಯನ್ನು ಸಲ್ಲಿಸುತ್ತದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಅನುದಾನವನ್ನು ಕೊಡಿಸಲು ಬಿಜೆಪಿ ಸಂಸದರು ಪ್ರಯತ್ನಿಸಬೇಕು ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು