ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

3000 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುವುದು: ಮಧು ಬಂಗಾರಪ್ಪ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

3000 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುವುದು: ಮಧು ಬಂಗಾರಪ್ಪ

ಮೈಸೂರು: ರಾಜ್ಯದಲ್ಲಿ ಈಗಾಗಲೇ 300 ಕರ್ನಾಟಕ ಪಬ್ಲಿಕ್ ಶಾಲೆಗಳಿವೆ. ಈ ವರ್ಷದಲ್ಲಿ 500 ಪಬ್ಲಿಕ್ ಶಾಲೆಗಳನ್ನು ಪ್ರಾರಂಭ ಮಾಡಲು ಚಿಂತಿಸಲಾಗಿದೆ. ಪ್ರತಿ ಎರಡು ಗ್ರಾ.ಪಂ. ಗಳಲ್ಲಿ ಒಂದು ಕರ್ನಾಟಕ ಪಬ್ಲಿಕ್ ಶಾಲೆ ತೆರೆಯುವ ಉದ್ದೇಶ ಇದ್ದು, ನಮ್ಮ ಆಡಳಿತವಾಧಿಯಲ್ಲಿ ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


ನಗರದ ಸರ್ಕಾರಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಮತ್ತೆ ಶಾಲೆಗಳಿಗೆ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳು ಹೆಚ್ಚು ಆರಂಭವಾದರೆ ಅವರಿಗೆ ಎಲ್.ಕೆ.ಜಿ, ಯುಕೆಜಿಯಿಂದಲೂ ಎಸೆಸೆಲ್ಸಿ ವರೆಗೆ ಗುಣಮಟ್ಟದ ಶಿಕ್ಷಣ ದೊರಕಲಿದೆ. ನಂತರ ಪಬ್ಲಿಕ್ ಶಾಲೆ ಪಕ್ಕದಲ್ಲೇ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದರು.


ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಡಲಾಗುವುದು. ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇನ್ನು 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಕನಿಷ್ಠ 10 ಸಾವಿರ ಶಿಕ್ಷಕರ ನೇಮಕಕ್ಕೆ ಅನುಮತಿ ಸಿಗಬಹುದು ಎಂದರು.
ಸರಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ಪೂರೈಲು ನಿರ್ಧರಿಸಲಾಗಿದ್ದು, ಮುಂಬರುವ ನವೆಂಬರ್ 1 ರಿಂದ ಇದು ಜಾರಿಗೆ ಬರಲಿದೆ ಎಂದು ಘೋಷಿಸಿದರು.


ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ನೀರು ಕೊಡಲು ನಿರ್ಧರಿಸಿದ್ದಾರೆ. ಬಹಳಷ್ಟು ಶಾಲೆಗಳು ವಿದ್ಯುತ್ ಬಿಲ್ ಕಟ್ಟಲು ಆಗದೆ ಕಂಪ್ಯೂಟರ್ ಶಿಕ್ಷಣ ಕೊಡಲು ಹಿಂಜರಿಯುತ್ತಿದ್ದರು. ಉಚಿತ ವಿದ್ಯುತ್ ನೀಡುವುದರಿಂದ ಮಕ್ಕಳಿಗೆ ಕಂಪ್ಯೂಟರ್ ತರಬೇತಿಯೂ ದೊರೆಯಲಿದೆ. ಇದರ ಜೊತೆಗೆ ಶಿಕ್ಷಣದಲ್ಲಿ ಹಿಂದುಳಿದ ಮಕ್ಕಳಿಗೆ ಶಿಕ್ಷಕರು ಸಂಜೆ ಸಮಯದಲ್ಲಿ ವಿದ್ಯುತ್ ಬಳಸಿಕೊಂಡು ಪಾಠ ಹೇಳಿಕೊಡಬಹುದು ಎಂದರು.


ಎಸೆಸೆಲ್ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ಅವಕಾಶ ಕೊಟ್ಟು ಅವರು ತೇರ್ಗಡೆ ಹೊಂದುವಂತೆ ಮಾಡಲಾಗುವುದು. ಅವರ ಅಂಕಪಟ್ಟಿಯಲ್ಲಿ ಅನುತ್ತೀರ್ಣ ಎಂಬ ಅಂಶವನ್ನೇ ಸೇರಿಸುವ ಉದ್ದೇಶ ಇಲ್ಲ ಎಂದರು.
ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. ಸದ್ಯ 40 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಕೆಲವು ಶಾಲೆಗಳಲ್ಲಿ ಕಡಿಮೆ ಮಕ್ಕಳಿದ್ದಾರೆ. ಅಂತಹ ಕಡೆಗಳಲ್ಲಿ ಆ ಮಕ್ಕಳನ್ನು ಒಂದು ಕಡೆ ಸೇರಿಸಿ ಶಿಕ್ಷಣ ಕೊಡಲು ಸೂಚಿಸಿದ್ದೇನೆ.
ನಿಯಮದ ಪ್ರಕಾರ ಸರ್ವ ಶಿಕ್ಷಣ ಅಭಿಯಾನದ ಮೂಲಕ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಅನುದಾನ ಬರಬೇಕಿತ್ತು. ಆದರೆ ಅನುದಾನವನ್ನೇ ನೀಡದೆ ಕೇಂದ್ರ ಸರಕಾರ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮಧು ಬಂಗಾರಪ್ಪ ಆರೋಪಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು