ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳು: ಮಧು ಬಂಗಾರಪ್ಪ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳು: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌) ಯಶಸ್ಸಿನ ಹಿನ್ನೆಲೆ, ರಾಜ್ಯದಲ್ಲಿ ಈ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಾಜ್ಯದ ಎರಡು ಗ್ರಾಮ ಪಂಚಾಯತ್‌ಗೆ ಒಂದರಂತೆ ಕೆಪಿಎಸ್‌ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಮೂಲಕ ಮುಂದಿನ ಮೂರು ವರ್ಷದೊಳಗೆ ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಪ್ರಾರಂಭಿಸಲಾಗುವುದು. ಈಗಿರುವ ಅಂದಾಜು 300 ಕೆಪಿಎಸ್‌ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಮಾರ್ಚ್‌ ಅಂತ್ಯದೊಳಗೆ ಪ್ರತ್ಯೇಕವಾಗಿ 500 ಶಾಲೆಗಳನ್ನು ಕೆಪಿಎಸ್‌ಗಳನ್ನಾಗಿ ಮೇಲ್ದರ್ಜೆಗೇರಿಸುವ ಗುರಿ ಇದೆ ಎಂದು ಶಿಕ್ಷಣ ಸಚಿವ ತಿಳಿಸಿದ್ದಾರೆ.

ಕರ್ನಾಟಕ ಸರಕಾರದ ಈ ಮಹತ್ವಕಾಂಕ್ಷಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 2018-19ನೇ ಸಾಲಿನಲ್ಲಿ ಒಟ್ಟು 176 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದ್ದು ಇದರ ಪ್ರಮುಖ ಉದ್ದೇಶ ಸರಕಾರಿ ಶಾಲೆಗಳ ಗುಣಮಟ್ಟವನ್ನು ಉತ್ತಮಪಡಿಸಿ ಶಾಲೆಗಳಲ್ಲಿ ಕನಿಷ್ಠ ಶೇ.75 ರಷ್ಟು ವಿದ್ಯಾರ್ಥಿಗಳು ಶೇ.75 ರಷ್ಟು ನಿಗದಿತ ಕಲಿಕಾ ಸಾಮರ್ಥ್ಯವನ್ನು ಹೊಂದುವುದು ಮತ್ತು ಉಳಿದ ವಿದ್ಯಾರ್ಥಿಗಳೂ ನಿಗದಿಪಡಿಸಿದ ಕಲಿಕಾ ಸಾಮರ್ಥ್ಯಗಳಲ್ಲಿ ಕನಿಷ್ಠ ಶೇ.50 ರಷ್ಟು ಗಳಿಸುವುದಾಗಿದೆ. ಇದರ ಜೊತೆಗೆ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ವಿಶ್ವಾಸಾರ್ಹ ವ್ಯವಸ್ಥೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದೆ.

ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಸಂಸ್ಥೆಗಳನ್ನು ಆಡಳಿತಾತ್ಮಕ, ಶೈಕ್ಷಣಿಕ ಮತ್ತು ಕ್ರಿಯಾತ್ಮಕ ಸಂಯೋಜನೆಯೊಂದಿಗೆ ಒಟ್ಟುಗೂಡಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಉತ್ಕೃಷ್ಟ ದರ್ಜೆಯ ಸೌಲಭ್ಯಗಳನ್ನೊಳಗೊಂಡ ಮಾದರಿ ಶಾಲೆಯನ್ನಾಗಿ ರೂಪಿಸಲು ಈ ಯೋಜನೆಯನ್ನು ಸಂಯೋಜಿಸಲಾಗಿದೆ.

ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಈ ಶಾಲಾ ಪದ್ಧತಿಯು ಸಾಕಷ್ಟು ಜನಪ್ರಿಯತೆ ಪಡೆದಿದ್ದು ಹನ್ನೆರಡನೆಯ ತರಗತಿಯ ತನಕ ಒಂದೇ ಸೂರಿನಡಿ ವಿದ್ಯೆ ದೊರೆಯುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವ ಸಾಧ್ಯತೆ ಕೂಡಾ ಕಡಿಮೆ ಎನ್ನಲಾಗಿದೆ.

.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು