ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಅನುದಾನ – ಸಿ ಎಂ ಸಿದ್ದರಾಮಯ್ಯ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಅನುದಾನ – ಸಿ ಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget 2026) ಅನ್ನು  ಮಂಡಿಸುತ್ತಿದ್ದಾರೆ. ಈ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, 2025-26ನೇ ಸಾಲಿನಲ್ಲಿ 100 ಉರ್ದು ಶಾಲೆಗಳನ್ನು 400 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ. 

ಮಾನವತೆಯ ಕಟ್ಟಡಕ್ಕೆ ಪ್ರೀತಿಯೊಂದೇ ಇಟ್ಟಿಗೆ” ಎಂಬ ಬಿ.ಆರ್. ಲಕ್ಷ್ಮಣರಾವ್ ಅವರ ಸಾಲುಗಳನ್ನು ಉಲ್ಲೇಖಿಸಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ಕೊಡುಗೆಗಳನ್ನು ನೀಡಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಯೋಜನೆಗಳು

ಶಿಶುನಾಳ ಶರೀಫ ವಸತಿ ಶಾಲೆ: ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ CBSE ಪಠ್ಯಕ್ರಮದ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 2026-27ನೇ ಸಾಲಿನಲ್ಲಿ ಒಟ್ಟು 25 ಅಂತಹ ಶಾಲೆಗಳನ್ನು ತೆರೆಯುವ ಗುರಿ ಇದೆ ಎಂದಿದ್ದಾರೆ. 

ಲ್ಯಾಪ್ಟಾಪ್ ವಿತರಣೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ ನೀಡಲು 5,000 ವಿದ್ಯಾರ್ಥಿಗಳಿಗೆ ತಲಾ 50,000 ರೂ. ಮೌಲ್ಯದ ಲ್ಯಾಪ್ಟಾಪ್ ನೀಡಲಾಗುವುದು ಎಂದು ಘೋಷಿಸಿದ್ದಾರೆ. NEET/JEE/K-CET ಪರೀಕ್ಷೆಗಳಿಗೆ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು ‘Center of Excellence’ ಗಳನ್ನಾಗಿ ಪರಿವರ್ತಿಸಲಾಗುವುದು, 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿ, ಹಳೆಯ ನಿಲಯಗಳ ಸಂಖ್ಯಾಬಲ ಹೆಚ್ಚಿಸಲಾಗುವುದು ಎಂದಿದ್ದಾರೆ

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು