ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

46 ನೇ ದಿನಕ್ಕೆ ಕಾಲಿಟ್ಟ ಬುಡಕಟ್ಟು ಸಮುದಾಯದ ಹೋರಾಟ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

46 ನೇ ದಿನಕ್ಕೆ ಕಾಲಿಟ್ಟ ಬುಡಕಟ್ಟು ಸಮುದಾಯದ ಹೋರಾಟ

ಮೈಸೂರು :  ಅರಣ್ಯ ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ಪಿರಿಯಾಪಟ್ಟಣದಲ್ಲಿ ಬುಡಕಟ್ಟು ಸಮುದಾಯದವರ ನಿರಂತರ  ಅಹೋರಾತ್ರಿ ಧರಣಿ ಸತ್ಯಾಗ್ರಹವು 46ನೇ ದಿನವೂ ಮುಂದುವರಿದೆ. ಈ ಹಿನ್ನಲೆಯಲ್ಲಿ  ಬುಡಕಟ್ಟು ಸಮುದಾಯಗಳ ಒಕ್ಕೂಟದ ಅನೇಕ ಜಿಲ್ಲೆಗಳ ರಾಜ್ಯ ಪ್ರತಿನಿಧಿಗಳು ನೆನ್ನೆ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಅರಣ್ಯ ಹಕ್ಕು ಕಾಯ್ದೆ 2006 ರಂತೆ ಅರಣ್ಯ ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ಪಿರಿಯಾಪಟ್ಟಣ ತಾಲೂಕಿನ ಅಲ್ಲೂರು ಅರಣ್ಯ ಇಲಾಖೆ ಕಛೇರಿ ಎದುರು ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಆಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹವು 46ನೇ ದಿನವೂ ಮುಂದುವರಿದಿದೆ.

ನಿನ್ನೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ರಾಜ್ಯ ಪ್ರತಿನಿಧಿಗಳಾದ ಶಿವಮೊಗ್ಗದ ರಾಮಣ್ಣ ಹಸಲರು, ಉಡುಪಿ ಜಿಲ್ಲೆಯ ಪುತ್ರನ್ ಕೊರಗ, ಕೊಡಗು ಜಿಲ್ಲೆಯ ಪುಷ್ಪ ಹಾಗೂ ಸವಿತಾ, ದಕ್ಷಿಣ ಕನ್ನಡ ಜಿಲ್ಲೆಯ ಸಂಜೀವ ಕೊರಗ, ಪುಟ್ಟ ಬಸವಯ್ಯ ಹಾಗೂ ಶೈಲೇಂದ್ರ ಮೈಸೂರು ಮುಂತಾದವರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಬುಡಕಟ್ಟು ಸಮುದಾಯದವರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ಪಿರಿಯಾಪಟ್ಟಣ ಪತ್ರಿಕಾ ಭವನದಲ್ಲಿ ಮಾತನಾಡುತ್ತಾ ಸಮಸ್ಯೆಯನ್ನು ಶೀಘ್ರ ಬಗೆಹರಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದರು.

ಇದನ್ನೂ ನೋಡಿ : ಕಾಂತಾರ ಚಿತ್ರದಲ್ಲಿ ಬಳಕೆಯಾಗಿರುವ ಬೂತಾರಾಧನೆ ವೈದಿಕವೋ ಅವೈದಿಕವೋ ಎಂಬ ವಿಷಯ ಈಗ ಚರ್ಚೆಗೆ ಒಳಗಾಗಿದೆ. ರಿಷಬ್ ಶೆಟ್ಟಿ ರಾಜಕೀಯ ನಿಲುವು, ಹೇಳಿಕೆಗಳ ಹೊರತಾಗಿ ಸಿನಿಮಾದಲ್ಲಿ ಹೇಳಿರುವುದೇನು? ಕನ್ನಡಪರ ಹೋರಾಟಗಾರ ದೀಪು ಗೌಡ ಮಾತಾಡಿದ್ದಾರೆ, ಒಮ್ಮೆ ಕೇಳಿಸಿಕೊಳ್ಳಿ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು