ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಟ್ಕುಳಿ ಗ್ರಾಮಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ ; ಸಂತ್ರಸ್ತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

P

Peepal Media Desk • ರಾಜ್ಯ

• 1 ನಿಮಿಷದ ಓದು

ಬೆಟ್ಕುಳಿ ಗ್ರಾಮಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ ; ಸಂತ್ರಸ್ತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಕುಮಟಾ : ಕರಾವಳಿ ಪ್ರದೇಶದಲ್ಲಿ ಅತಿಯಾಗಿರುವ ಮಳೆ ಪ್ರಮಾಣದ ಹಿನ್ನೆಲೆಯಲ್ಲಿ ಸರ್ಕಾರದ ಕಡೆಯಿಂದ ಮಳೆ ಹಾನಿ ಪ್ರದೇಶಗಳಿಗೆ ಸಚಿವರ ಭೇಟಿ ಕಾರ್ಯ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಉತ್ತರ ಕನ್ನಡ ಜಿಲ್ಲೆಯ ಕುಮಟಾ‌ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿ ಮಳೆ ಸಂತ್ರಸ್ತರ ಭೇಟಿ ಮಾಡಿ ಸಮಾಲೋಚಿಸಿದರು.

ಕುಮಟಾ ತಾಲ್ಲೂಕಿನ ಪೋಸ್ಟ್ ಬೆಟ್ಟುಳಿಯಲ್ಲಿ ಎರಡು ದಿನಗಳ ಹಿಂದೆ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಸತೀಶ ನಾಯ್ಕ ಮತ್ತು ಉಲ್ಲಾಸ ಗಾವಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ,ಬೆಟ್ಕುಳಿ ಗ್ರಾಮದಲ್ಲಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಇಬ್ಬರ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆ ನಂತರ ಸಂತ್ರಸ್ತರ ಕಡೆಯಿಂದ ಮಳೆಯಿಂದಾದ ಅನಾಹುತದ ಬಗ್ಗೆ ಮಾಹಿತಿ ಪಡೆಯಲಾಯಿತು.

ಹಾಗೆಯೇ ಕರಾವಳಿ ಕರ್ನಾಟಕ ಭಾಗದ ಮಳೆ ಪೀಡಿತ ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಧ್ಯಕ್ಕೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಪಡೆಯನ್ನೂ ಸ್ಥಳದಲ್ಲಿ ನಿಯೋಜಿಸಲಾಗಿದೆ. ಎಂತಹದೇ ಪ್ರಾಕೃತಿಕ ವಿಕೋಪ ಉಂಟಾದರೂ ವಿಪತ್ತು ನಿರ್ವಹಣಾ ಪಡೆಯನ್ನು ಸಂಪರ್ಕಿಸಿ ಸಹಾಯ ಪಡೆಯಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಈ ವೇಳೆ ಮಳೆ ಅನಾಹುತದ ಬಗ್ಗೆ ಪತ್ರಕರ್ತರಿಗೆ ಮಾಹಿತಿ ನೀಡಿರುವ ಸಚಿವ ಕೃಷ್ಣಭೈರೇಗೌಡ, “ಮಳೆಯಿಂದ ರಾಜ್ಯದಲ್ಲಿ ಈವರೆಗೆ 21 ಜನ ಜೀವ ಕಳೆದುಕೊಂಡಿದ್ದು ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಅವಶ್ಯಕತೆ ಇರುವ ಕಡೆ ಕಾಳಜಿ ಕೇಂದ್ರ ತೆರೆಯಲಾಗುತ್ತಿದೆ. ಸರ್ಕಾರ ಸಂತ್ರಸ್ತರಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದೆ. ಕೇಂದ್ರದ ನಾಲ್ಕು ಎನ್.ಡಿ.ಆರ್.ಎಫ್, ರಾಜ್ಯದ ಐದು ಎಸ್.ಡಿ.ಆರ್.ಎಫ್. ತುಕಡಿ ಪ್ರಕೃತಿ ವಿಕೋಪ ಪರಿಹಾರ ಕಾರ್ಯಕ್ಕೆ ಸನ್ನದ್ಧವಾಗಿದೆ” ಎಂದು ಮಾಹಿತಿ ನೀಡಿದರು.

ಮೋಡ ಭಿತ್ತನೆ ಸದ್ಯಕ್ಕಿಲ್ಲ

ರಾಜ್ಯದಾದ್ಯಂತ ಪ್ರಸ್ತುತ ಉತ್ತಮ ಮಳೆಯಾಗುತ್ತಿದ್ದು, ಸದ್ಯಕ್ಕೆ ಮೋಡ ಭಿತ್ತನೆ ಮಾಡುವ ಆಲೋಚನೆ ಇಲ್ಲ ಎಂದೂ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ನೆರೆಪೀಡಿತ ಪ್ರದೇಶಗಳ ಪರಿಶೀಲನೆ ವೇಳೆ ಮೋಡ ಭಿತ್ತನೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಜುಲೈನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ವರದಿ ನೀಡಿತ್ತು. ಅದರಂತೆ ಸರಾಸರಿಗಿಂತಲೂ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಮೋಡ ಭಿತ್ತನೆಯ ಚಿಂತನೆ ಸದ್ಯಕ್ಕಿಲ್ಲ.” ಎಂದು ಮಾಹಿತಿ ನೀಡಿದರು.

ಆನಂತರ ಕಂದಾಯ ಇಲಾಖೆ‌ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿ, ಮೃತ ಇಬ್ಬರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ. ಸಚಿವರ ಜೊತೆಗೆ ಶಾಸಕ ದಿನಕರ ಶೆಟ್ಟಿ, ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಉಪಸ್ಥಿತರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version