ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇವನಹಳ್ಳಿಯಲ್ಲಿ ಅಕ್ಕ ಬೇಕರಿ/ಕೆಫೆಗೆ ಚಾಲನೆ: ರಾಜ್ಯಾದ್ಯಂತ 50 ಅಕ್ಕ ಬೇಕರಿ/ಕೆಫೆ ಸ್ಥಾಪನೆ

P

Peepal Media • ರಾಜ್ಯ

• 1 ನಿಮಿಷದ ಓದು

ದೇವನಹಳ್ಳಿಯಲ್ಲಿ ಅಕ್ಕ ಬೇಕರಿ/ಕೆಫೆಗೆ ಚಾಲನೆ: ರಾಜ್ಯಾದ್ಯಂತ 50 ಅಕ್ಕ ಬೇಕರಿ/ಕೆಫೆ ಸ್ಥಾಪನೆ

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಪ್ರಾರಂಭಿಸಲಾಯಿತು.
ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2 ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲಾಗುವುದು ಎಂದರು. ಹಾಗೇಯೇ ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.
ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ.
ಧ ಸರ್ಕಾರ ಬಜೆಟ್​​ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.
ಕೌಶಲಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ
ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅದು ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version