ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತ್ತೆ 53 ತಾಲೂಕುಗಳಿಗೆ ಬರಪೀಡಿತ ಘೋಷಣೆ : ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ; ಪರಿಹಾರ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಮತ್ತೆ 53 ತಾಲೂಕುಗಳಿಗೆ ಬರಪೀಡಿತ ಘೋಷಣೆ : ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ; ಪರಿಹಾರ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಹಾಗೂ ಬೆಳೆ ಪರಿಸ್ಥಿತಿಯ ವೈಜ್ಞಾನಿಕ ಮೌಲ್ಯಮಾಪನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮತ್ತಷ್ಟು 53 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಈ ಸೇರ್ಪಡೆಯೊಂದಿಗೆ ರಾಜ್ಯದಲ್ಲಿ ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ.

ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದ ಕಾರ್ಯದರ್ಶಿ ಹಾಗೂ ಪರಿಹಾರ ಆಯುಕ್ತ ಮನೋಜ್ ಕುಮಾರ್ ಮೀನಾ ಅವರ ನೇತೃತ್ವದಲ್ಲಿ ಹೊರಡಿಸಲಾದ ಆದೇಶದ ಅನ್ವಯ ಹೊಸದಾಗಿ ಸೇರ್ಪಡೆಯಾದ ತಾಲೂಕುಗಳ ಪೈಕಿ 51 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 2 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಕೈಗೊಂಡ ಮಳೆ, ಮಣ್ಣಿನ ತೇವಾಂಶ ಹಾಗೂ ಬೆಳೆ ಪರಿಸ್ಥಿತಿಯ ವೈಜ್ಞಾನಿಕ ವಿಶ್ಲೇಷಣೆ ಮತ್ತು ಕ್ಷೇತ್ರಮಟ್ಟದ ಬೆಳೆ ಪರಿಶೀಲನೆಯ ಆಧಾರದ ಮೇಲೆ ತಾಲೂಕುಗಳನ್ನು ಗುರುತಿಸಲಾಗಿದೆ. ಬರ ಘೋಷಣೆಗೆ ಕೇಂದ್ರ ಸರ್ಕಾರದ 2020ರ ಬರ ನಿರ್ವಹಣಾ ಮಾರ್ಗಸೂಚಿಗಳನ್ನು ಆಧಾರವಾಗಿಟ್ಟುಕೊಳ್ಳಲಾಗಿದೆ.

ಜಿಲ್ಲಾವಾರು ಹೊಸ ಬರಪೀಡಿತ ತಾಲೂಕುಗಳು
ಬೆಳಗಾವಿ: ಅಥಣಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿ, ಕಿತ್ತೂರು, ಮೂಡಲಗಿ, ನಿಪ್ಪಾಣಿ, ರಾಯಬಾಗ, ಯರಗಟ್ಟಿ.
ಹಾವೇರಿ: ಬ್ಯಾಡಗಿ, ಹಾನಗಲ್, ಹಾವೇರಿ, ರಾಣೆಬೆನ್ನೂರು, ಸವಣೂರು, ಶಿಗ್ಗಾಂವಿ.
ಯಾದಗಿರಿ: ಗುರುಮಿಠಕಲ್, ಹುಣಸಗಿ, ಶೋರಾಪುರ, ವಡಗೇರಾ, ಯಾದಗಿರಿ.
ಕಲಬುರಗಿ: ಚಿಂಚೋಳಿ, ಜೇವರ್ಗಿ, ಕಾಳಗಿ, ಕಮಲಾಪುರ, ಸೇಡಂ.
ಬಾಗಲಕೋಟೆ: ಬಾದಾಮಿ, ಹುನಗುಂದ, ಮುಧೋಳ, ರಬಕವಿ-ಬನಹಟ್ಟಿ, ತೇರದಾಳ.
ವಿಜಯಪುರ: ಆಲಮೇಲ, ದೇವರ ಹಿಪ್ಪರಗಿ, ಮುದ್ದೇಬಿಹಾಳ, ಸಿಂದಗಿ.
ಚಿತ್ರದುರ್ಗ: ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು.
ಗದಗ: ಲಕ್ಷ್ಮೇಶ್ವರ, ನರಗುಂದ, ಶಿರಹಟ್ಟಿ.
ಹಾಸನ: ಆಲೂರು, ಬೇಲೂರು.
ಕೊಪ್ಪಳ: ಕೊಪ್ಪಳ, ಯಲಬುರ್ಗಾ.
ವಿಜಯನಗರ: ಕೊಟ್ಟೂರು, ಕೂಡ್ಲಿಗಿ.
ಬಳ್ಳಾರಿ: ಸಿರುಗುಪ್ಪ.
ದಾವಣಗೆರೆ: ಹರಿಹರ.
ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ.
ಬೆಂಗಳೂರು ನಗರ: ಬೆಂಗಳೂರು ದಕ್ಷಿಣ – ಸಾಧಾರಣ ಬರ.
ಬೀದರ್: ಹುಲಸೂರ, ಕಮಲಾನಗರ.
ಉಡುಪಿ: ಬ್ರಹ್ಮಾವರ – ಸಾಧಾರಣ ಬರ.

ಕುಡಿಯುವ ನೀರು, ಮೇವು ಪೂರೈಕೆಗೆ ಒತ್ತು
ಬರಪೀಡಿತ ತಾಲೂಕುಗಳಲ್ಲಿ SDRF ನಿಯಮಾವಳಿಗಳ ಅನ್ವಯ ಕುಡಿಯುವ ನೀರು, ಮೇವು ಪೂರೈಕೆ ಸೇರಿದಂತೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಅಧಿಕಾರ ನೀಡಿದೆ.

ಅದೇ ವೇಳೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ಬೆಳೆ ಹಾನಿಯ ಜಂಟಿ ಸಮೀಕ್ಷೆ ನಡೆಸಿ, ಅಗತ್ಯ ವರದಿಯನ್ನು ಶೀಘ್ರ ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಬರದ ಪರಿಸ್ಥಿತಿಯನ್ನು ಹಂತ ಹಂತವಾಗಿ ಪರಿಶೀಲಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅರ್ಹತೆ ಹೊಂದುವ ಮತ್ತಷ್ಟು ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸುವ ಸಾಧ್ಯತೆ ಇದೆ. ಈಗಾಗಲೇ 101 ತಾಲೂಕುಗಳನ್ನು ಮೊದಲ ಹಂತದಲ್ಲಿ ಹಾಗೂ 23 ತಾಲೂಕುಗಳನ್ನು ಎರಡನೇ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲಾಗಿತ್ತು. ಇದೀಗ 53 ತಾಲೂಕುಗಳ ಸೇರ್ಪಡೆಯೊಂದಿಗೆ ಸಂಖ್ಯೆ 177ಕ್ಕೆ ತಲುಪಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು