ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೋಮು ಪ್ರಚೋದನೆ ರೀಲ್ಸ್‌: 6 ಮಂದಿ ಬಂಧನ, ಪುನೀತ್‌ ಕೆರೆಹಳ್ಳಿ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

P

Peepal Media • ರಾಜ್ಯ

• 1 ನಿಮಿಷದ ಓದು

ಕೋಮು ಪ್ರಚೋದನೆ ರೀಲ್ಸ್‌: 6 ಮಂದಿ ಬಂಧನ, ಪುನೀತ್‌ ಕೆರೆಹಳ್ಳಿ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಉಂಟುಮಾಡುವ ರೀಲ್ಸ್‌ ಮತ್ತು ಸಂದೇಶಗಳನ್ನು ಹಂಚಿಕೊಂಡು ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ ಆರೋಪದಲ್ಲಿ ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಒಟ್ಟು 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 3ರಂದು ರಾತ್ರಿ ಉರ್ವ ಪೊಲೀಸರು ಫೇಸ್‌ಬುಕ್ ಪರಿಶೀಲನೆ ನಡೆಸುತ್ತಿದ್ದಾಗ, ಪುನೀತ್ ಕೆರೆಹಳ್ಳಿ ಎಂಬಾತನ ಖಾತೆಯಲ್ಲಿ ಎರಡು ಸಮುದಾಯಗಳ ನಡುವೆ ಕೋಮು ದ್ವೇಷವನ್ನು ಹುಟ್ಟಿಸುವಂತಹ ರೀಲ್ಸ್‌ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


***

ಇದೇ ಸಂದರ್ಭದಲ್ಲಿ, ಮಂಗಳೂರಿನ ಇತರ ಪ್ರದೇಶಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದಲ್ಲಿ ಆರು ಜನರನ್ನು ಬಂಧಿಸಲಾಗಿದೆ.

ಉಡುಪಿ ಜಿಲ್ಲೆಯ ಹೆಜಮಾಡಿ ಗ್ರೀನ್‌ಹೌಸ್ ಎನ್‌.ಎಸ್. ರೋಡ್ ನಿವಾಸಿ ಮೊಹಮ್ಮದ್ ಅಸ್ಲಾಂ (23) ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಇಡ್ಯಾ ಗ್ರಾಮದ ಕಾಟಿಪಳ್ಳ ಆಶ್ರಯ ಕಾಲೊನಿ ನಿವಾಸಿಗಳಾದ ಚೇತನ್ (20) ಮತ್ತು ನಿತಿನ್ ಅಡಪ (23) ಎಂಬವರನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಫರಂಗಿಪೇಟೆ ಅರ್ಕುಳ ಕೊಪ್ಪಲ್ ಹೌಸ್‌ನ ರಿಯಾಝ್ ಇಬ್ರಾಹಿಂ (30), ಕೂಳೂರು ಕಸಬಾ ಬೆಂಗ್ರೆ ಕಿಲೇರಿಯಾ ಮಸೀದಿ ಬಳಿಯ ನಿವಾಸಿ ಜಮಾಲ್ ಝಾಕೀರ್ (21) ಹಾಗೂ ಹಳೆಯಂಗಡಿ ಕೊಳವೈಲ್‌ನ ಗುರುಪ್ರಸಾದ್ ಎಂಬವರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.


P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version