ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ, ಇಲ್ಲವಾದಲ್ಲಿ ಪರವಾನಿಗೆ ರದ್ದು

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ, ಇಲ್ಲವಾದಲ್ಲಿ ಪರವಾನಿಗೆ ರದ್ದು

ಮಂಡ್ಯ: ಸರ್ಕಾರದ ಆದೇಶದ ಪ್ರಕಾರ ಸ್ಥಳೀಯ ಪ್ರಾಧಿಕಾರ, ನಗರ ಸಭೆ, ಪುರಸಭೆ, ಗ್ರಾಮ ಪಂಚಾಯಿತಿಗಳಿಂದ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಕಟ್ಟಡ, ಕೈಗಾರಿಕೆ ಕಟ್ಟಡ, ಆಸ್ಪತ್ರೆ, ಪ್ರಯೋಗಾಲಯ, ಅಂಗಡಿಗಳು, ಹೋಟೆಲ್ ಗಳು ಅನಾವರಣಗೊಳಿಸುವ ನಾಮಪಲಕಗಳಲ್ಲಿ ಶೇ60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ – 2022 ನ್ನು ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024 ರನ್ವಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರವಾನಗಿ ರದ್ದು ನಾಮಪಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಇರಬೇಕು ಎಂದು ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದನ್ನು ಅನುಸರಿಸದಿದ್ದಲ್ಲಿ ಸ್ಥಳೀಯ ಸಂಸ್ಥೆಗಳು ಅಥವಾ ಅನುಷ್ಠಾನ ಪ್ರಾಧಿಕಾರ ಪರವಾನಗಿ ರದ್ದು ಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಕೈಗಾರಿಕೆ ಇಲಾಖೆ, ಅಂಗಡಿ ಮುಂಗಟ್ಟಿಗೆ -ಸ್ಥಳೀಯ ಸಂಸ್ಥೆಗಳು, ಖಾಸಗಿ ಶಾಲಾ ಕಾಲೇಜು- ಶಿಕ್ಷಣ ಇಲಾಖೆ ಈಗೆ‌ ವಿವಿಧ ಇಲಾಖೆಗಳು 7 ದಿನದೊಳಗಾಗಿ ಪರಿಶೀಲನೆ ನಡೆಸಿ ನಾಮಪಲಕಗಳಲ್ಲಿ ಶೇ 60 ಕನ್ನಡ ಭಾಷೆ ಬಳಸಿರುವ ಬಗ್ಗೆ ವರದಿ ನೀಡಬೇಕು. ಶೇ 60 ಇಲ್ಲದಿದ್ದಲ್ಲಿ ವಿಧಿಸಿರುವ ದಂಡ ಅಥವಾ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಬೇಕು ಎಂದರು.

ಈ ಅಧಿನಿಯಮದಲ್ಲಿ ಮೊದಲನೇಯ ಬಾರಿ ಅಪರಾಧಕ್ಕೆ ರೂ 5000/- , ಎರಡನೇಯ ಬಾರಿಗೆ ರೂ 10,000/-, ಮೂರನೇಯ ಬಾರಿಗೆ ರೂ 20,000/-, ದಂಡ ಮತ್ತು ನಾಲ್ಕನೇ ಬಾರಿಗೆ ದಂಡದೊಂದಿಗೆ ಪರವಾನಗಿ ರದ್ದು ಪಡಿಸಲು ಅವಕಾಶವಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕನ್ನಡ ಭಾಷಾ ನಾಮಪಲಕ ಶೇ 60 ರಷ್ಟು ಅಳವಡಿಕೆ ಯಾಗಿಲ್ಲ ಎಂದು ದೂರುಗಳು ಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಬೇಕೆಂದು ಸರ್ಕಾರ ಆದೇಶವನ್ನು ಹೊರಡಿಸಿದೆ. ಕನ್ನಡ ಭಾಷೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಎಲ್ಲಾ ನಾಮಫಲಕಗಳು ಕಡ್ಡಾಯವಾಗಿ ಶೇ. 60% ಕನ್ನಡ ಭಾಷೆಯಲ್ಲಿ ಹಾಗೂ ಶೇ. 40% ಇತರೆ ಭಾಷೆಗಳಲ್ಲಿ ಇರಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು ಅವರು ಪ್ರತಿ ಮೂರು ತಿಂಗಳಿಗೊಮ್ಮೆ ಅನುಷ್ಠಾನದ ಬಗ್ಗೆ ವರದಿ ಮಾಡಿ ನೋಟಿಸ್ ಜಾರಿ ಮಾಡಿರುವ ಹಾಗೂ ದಂಡ ವಿಧಿಸಿರುವ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದರು.

ಕನ್ನಡ ಭಾಷೆಗೆ ಆದ್ಯತೆ ನಾಮಪಲಕ ಬರೆಯುವಾಗ ಮೊದಲು ಅಥವಾ ಮೇಲಿನ ಸಾಲನ್ನು ಕನ್ನಡ ಭಾಷೆಯಲ್ಲಿ ಬರೆಯಬೇಕು ಶೇ 60 ರಷ್ಟು ಕನ್ನಡ ಭಾಷೆಯಲ್ಲಿರಬೇಕು. ನಾಮಫಲಕ ನೋಡಿದ ಸಂದರ್ಭದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿ ಕನ್ನಡಾಭಿಮಾನ ಮೆರೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು‌ ತಿಳಿಸಿದರು.

ನಾಮಪಲಕದಲ್ಲಿ ಶೇ 60 ರಷ್ಟು ಸ್ಥಳಾವಕಾಶ ಕನ್ನಡ ಭಾಷೆಗೆ ನೀಡಿದ ನಂತರ ಕೆಳಭಾಗದಲ್ಲಿ ಆಂಗ್ಲ, ಹಿಂದಿ ಬೇರೆ ಭಾಷೆಗಳನ್ನು ಬಳಸಿಕೊಳ್ಳಿ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮೋಹನ್, ಡಿ.ಡಿ.ಎಲ್.ಆರ್. ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು