ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವೃತ್ತಿಪರ ಕೋರ್ಸ್‌ಗಳಲ್ಲಿ ಶೇ. 7.5 ರಷ್ಟು ಒಳಮೀಸಲಾತಿ – ಕರಡು ನಿಯಮ ಪ್ರಕಟ

ರ

ರಮೇಶ್‌ ಹಾಸನ್‌ • ದೇಶ, ರಾಜ್ಯ

• 1 ನಿಮಿಷದ ಓದು

ವೃತ್ತಿಪರ ಕೋರ್ಸ್‌ಗಳಲ್ಲಿ ಶೇ. 7.5 ರಷ್ಟು ಒಳಮೀಸಲಾತಿ – ಕರಡು ನಿಯಮ ಪ್ರಕಟ

ಬೆಂಗಳೂರು : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆಯ ಬೆನ್ನಲ್ಲೇ, ಉನ್ನತ ಶಿಕ್ಷಣ ಇಲಾಖೆಯು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಶೇ. 15ರಷ್ಟು ಇರುವ ಗ್ರಾಮೀಣ ಕೋಟಾವನ್ನು ತಲಾ ಶೇ. 7.5 ರಂತೆ ಎರಡು ಭಾಗಗಳಾಗಿ ವಿಭಜಿಸಿ ಕರಡು ನಿಯಮಗಳ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಮೊನ್ನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ, ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಶೇಕಡಾ 7.5 ರಷ್ಟು ಮೀಸಲಾತಿ ನೀದುವುದಾಗಿ ಘೋಷಿಸಿದ್ದರು. ಇದರ ಬೆನಲ್ಲೇ, ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ನಿಯಮಗಳು, 2006ರ ನಿಯಮ 9ಕ್ಕೆ ತಿದ್ದುಪಡಿ ತರಲು ಈ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ,  ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ಪ್ರಮುಖ ವೃತ್ತಿಪರ ಉನ್ನತ ಶಿಕ್ಷಣ ಕೋರ್ಸ್‌ಗಳ ಸರ್ಕಾರಿ ಸೀಟುಗಳ ಪ್ರವೇಶಾತಿಗೆ ಅನ್ವಯವಾಗುವಂತೆ, ಉನ್ನತ ಶಿಕ್ಷಣ ಇಲಾಖೆಯು ಸದ್ಯ ಚಾಲ್ತಿಯಲ್ಲಿರುವ ಒಟ್ಟು ಶೇ. 15ರಷ್ಟು ಗ್ರಾಮೀಣ ಮೀಸಲಾತಿಯನ್ನು ಸಮಾನವಾಗಿ ಎರಡು ಭಾಗಗಳಾಗಿ ಹಂಚಿಕೆ ಮಾಡಿ ಕರಡು ನಿಯಮಗಳ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಅವು,

  • ಶೇ. 7.5 ರಷ್ಟು ಒಳಮೀಸಲಾತಿ (ಸರ್ಕಾರಿ ಶಾಲೆಗಳು): ಕರ್ನಾಟಕದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಓದಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದು ಲಭ್ಯವಿರಲಿದೆ.
  • ಇನ್ನುಳಿದ ಶೇ. 7.5 ರಷ್ಟು ಮೀಸಲಾತಿ (ಇತರ ಸಂಸ್ಥೆಗಳು): ಗ್ರಾಮೀಣ ಪ್ರದೇಶದಲ್ಲಿರುವ ಇತರ ಯಾವುದೇ ಮಾನ್ಯತೆ ಪಡೆದ (ಖಾಸಗಿ ಹಾಗೂ ಅನುದಾನಿತ ಸೇರಿದಂತೆ) ಶೈಕ್ಷಣಿಕ ಸಂಸ್ಥೆಗಳು ಅಥವಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಸಿಗಲಿದೆ.

ಮುಂದುವರೆದು, ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಆಕ್ಷೇಪಣೆ ಹಾಗೂ ಸಲಹೆಗಳನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು (ಎಂ.ಎಸ್. ಬಿಲ್ಡಿಂಗ್, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001) ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ನಿಯಮಗಳು ಅಧಿಕೃತವಾಗಿ ರಾಜ್ಯ ಗೆಜೆಟ್‌ನಲ್ಲಿ ಪ್ರಕಟಗೊಂಡು ಜಾರಿಗೆ ಬರಲಿವೆ.

ಒಟ್ಟಾರೆಯಾಗಿ, ಖಾಸಗಿ ಶಾಲೆಗಳ ಪೈಪೋಟಿಯಿಂದಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಸೀಟು ಸಿಗುವುದು ಕಷ್ಟವಾಗುತ್ತಿತ್ತು. ಈ ಹೊಸ ನಿಯಮದಿಂದಾಗಿ ಹಳ್ಳಿಗಳ ಸರ್ಕಾರಿ ಶಾಲಾ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಬಲ ಸಿಕ್ಕಂತಾಗಿದೆ.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version