ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗೋರಕ್ಷಣೆ ಹೆಸರಿನಲ್ಲಿ ವಸೂಲಿ ದಂಧೆ: ಹಿಂದೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷನ ಸಮೇತ ಏಳು ಮಂದಿ ಬಂಧನ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಗೋರಕ್ಷಣೆ ಹೆಸರಿನಲ್ಲಿ ವಸೂಲಿ ದಂಧೆ: ಹಿಂದೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷನ ಸಮೇತ ಏಳು ಮಂದಿ ಬಂಧನ

ಗೋ ರಕ್ಷಣೆ ನಡೆಸುವ ನೆಪದಲ್ಲಿ ಹಣ ವಸೂಲಿಗೆ ಇಳಿದಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ, ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನ ಹುಣಸೂರು ಪೊಲೀಸರು ಬಂಧಿಸಿದ್ದಾರೆ.

ದುಷ್ಕರ್ಮಿಗಳು ಜಾನುವಾರು ಸಾಗಿಸುವ ವಾಹನಗಳನ್ನು ಅಡ್ಡಗಟ್ಟಿ ವಸೂಲಿ ಮಾಡುವ ದಂಧೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆ ಸೇರಿದಂತೆ ಏಳು ಮಂದಿ ತಂಡವನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಹಯಣಸೂರು ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಹಿಂದೂ ರಾಷ್ಟ್ರೀಯ ರಕ್ಷಣಾ ವೇದಿಕೆ ಅಧ್ಯಕ್ಷ ಬೆಂಗಳೂರು ಉತ್ತರಹಳ್ಳಿಯ ರಾಮಕೃಷ್ಣ ಮತ್ತು ಬೆಂಗಳೂರಿನ ವಿವಿಧ ಬಡಾವಣೆ ನಿವಾಸಿಗಳಾದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆ.ಆರ್.ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಬಂಧಿತರು.

ತಾಲೂಕಿನ ರತ್ನಪುರಿಯ ಕಿರಣ್ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಕಟ್ಟೆಮಳಲವಾಡಿ ಬಳಿ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್ಣನ್ನು ಬೆದರಿಸಿ 25 ಸಾವಿರ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.

ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ. ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.ಈ ವೇಳೆ ಏನು ನಡೆಯುತ್ತಿದೆ ಎನ್ನುವ ಕುತೂಹಲದೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ ಜನರು ಜಮಾಯಿಸಿದರು.

ನಂತರ ವಿಷಯ ತಿಳಿದ ಜನರು ಆರೋಪಿಗಳ ವಿರುದ್ದ ತಿರುಗಿ ಬಿದ್ದು ತರಾಟೆ ತೆಗೆದುಕೊಂಡು ಚೆನ್ನಾಗಿ ಹೊಡೆದು ಪೊಲೀಸ್‌ ಸಹಾಯವಾಣಿ 112 ಕ್ಕೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇವರ ಕುತಂತ್ರ ಬಯಲಾಗಿದೆ. ಈ ಸಂಬಂಧ ಕಿರಣ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಇದೇ ತಂಡ ಕೆ.ಆ‌ರ್.ನಗರದಲ್ಲೂ ಗ್ಯಾಸ್ ಅಂಗಡಿಯೊಂದರ ಮಾಲಿಕನನ್ನು ಬೆದರಿಸಿ 20 ಸಾವಿರ ರೂ ಕಿತ್ತಿದ್ದಾರೆ. ಚಾಮರಾಜನಗರದಲ್ಲಿ ಎರಡು ವರ್ಷಗಳ ಹಿಂದೆ ಹಾಗೂ ಬೆಂಗಳೂರಿನಲ್ಲೂ ಇದೀಗ ಹುಣಸೂರು ಮತ್ತು ಕೆ.ಆರ್.ನಗರ ಠಾಣೆಯಲ್ಲಿ ಇವರ ವಿರುದ್ದ ಪ್ರಕರಣ ದಾಖಲಾಗಿದೆ.ಅಡಿಷನಲ್ ಎಸ್.ಪಿ.ಮಲ್ಲಿಕ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಡಿವೈಎಸ್ಪಿ ಗೋಪಾಲಕೃಷ್ಣ, ಇನ್‌ಸ್ಪೆಕ್ಟ‌ರ್ ಮುನಿಯಪ್ಪ ಹಾಜರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು