ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

KEA ಹಗರಣದ: ಆರ್‌ಡಿ ಪಾಟೀಲನನ್ನು 8 ದಿನಗಳ ಸಿಐಡಿ ಕಸ್ಟಡಿಗೆ ಒಪ್ಪಿಸಿದ ಕೋರ್ಟ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

KEA ಹಗರಣದ: ಆರ್‌ಡಿ ಪಾಟೀಲನನ್ನು 8 ದಿನಗಳ ಸಿಐಡಿ ಕಸ್ಟಡಿಗೆ ಒಪ್ಪಿಸಿದ ಕೋರ್ಟ್

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹಗರಣದ ಕಿಂಗ್‌ ಪಿನ್ ಆರ್‌ಡಿ ಪಾಟೀಲನನ್ನು ಕಲಬುರಗಿ ನ್ಯಾಯಾಲಯವು ಶನಿವಾರ ಎಂಟು ದಿನಗಳ ಅಪರಾಧ ತನಿಖಾ ಇಲಾಖೆ (ಸಿಐಡಿ) ಕಸ್ಟಡಿಗೆ ಒಪ್ಪಿಸಿದೆ. ಕಲಬುರಗಿ ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸಿಐಡಿ ಆರೋಪಿಯನ್ನು ಕಸ್ಟಡಿಗೆ ಕೋರಿ ಅರ್ಜಿ ಸಲ್ಲಿಸಿತ್ತು.

ಪಾಟೀಲನ ಒಂಬತ್ತು ದಿನಗಳ ಸಿಐಡಿ ಕಸ್ಟಡಿ ಕೊನೆಗೊಂಡ ನಂತರ ಗುರುವಾರ, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಆದರೆ, ತನಿಖೆ ಅಪೂರ್ಣಗೊಂಡಿದ್ದರಿಂದ ಸಿಐಡಿ ಮತ್ತೆ ವಶಕ್ಕೆ ತೆಗೆದುಕೊಂಡಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ವಿಭಾಗದ ಸಹಾಯಕ ಹುದ್ದೆಗಳಿಗೆ ಅಕ್ಟೋಬರ್ 28ರಂದು ಕೆಇಎ ಪ್ರವೇಶ ಪರೀಕ್ಷೆ ನಡೆಸಿತ್ತು.

ಪರೀಕ್ಷೆ ವೇಳೆ ಕಲಬುರಗಿ ಮತ್ತು ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್‌ ಬಳಸಿ ನಕಲು ಮಾಡಿದ ಹಲವು ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಪರೀಕ್ಷೆಯಲ್ಲಿ ನಕಲು ಮಾಡಿದ ಅಭ್ಯರ್ಥಿಗಳ ವಿರುದ್ಧ ಪೊಲೀಸರು ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಪ್ರಕರಣದಲ್ಲಿ 40ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಕಳೆದ ಮೂರು ವರ್ಷಗಳಲ್ಲಿ, ಪಾಟೀಲ ಅಕ್ರಮವಾಗಿ ಸರ್ಕಾರಿ ಪರೀಕ್ಷೆಗಳಲ್ಲಿ ಕಾಪಿ ಮಾಡಿಸಲು ಹಣ ಪಡೆದು ಒಪ್ಪಂದ ಮಾಡಿಕೊಳ್ಳುತ್ತಿದ್ದ ಎನ್ನಲಾಗುತ್ತಿದೆ. ಈತನ ವಿರುದ್ಧ 15ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ.

ಕೆಇಎ ಪರೀಕ್ಷೆ ಹಗರಣ ಪ್ರಕರಣದಲ್ಲಿ ಹಲವು ಪ್ರಕರಣಗಳು ದಾಖಲಾದ ಬಳಿಕ ರಾಜ್ಯದಿಂದ ಪರಾರಿಯಾಗಿದ್ದ. ನಂತರ ಈತನನ್ನು ಕಲಬುರಗಿ ಪೊಲೀಸರ ತಂಡ ಮಹಾರಾಷ್ಟ್ರದ ಅಕ್ಕಲಕೋಟದಿಂದ ಬಂಧಿಸಿದೆ. ವರದಿಗಳ ಪ್ರಕಾರ, ಪಾಟೀಲ್ ಆಪ್ತ ಸಹಾಯಕರ ಮೂಲಕ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಮತ್ತು ಹಲವಾರು ಸರ್ಕಾರಿ ಪರೀಕ್ಷೆಗಳನ್ನು ಕಾನೂನುಬಾಹಿರವಾಗಿ ಉತ್ತೀರ್ಣರಾಗಲು ಸಹಾಯ ಒದಗಿಸುತ್ತಿದ್ದ.

2022ರ ಜನವರಿಯಲ್ಲಿ ಸ್ಫೋಟಗೊಂಡ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಪಾಟೀಲ್ ಹೆಸರು ಮೊದಲ ಬಾರಿಗೆ ಕೇಳಿಬಂದಿತು. ರಾಜ್ಯ ಸರ್ಕಾರವು 2021ರಲ್ಲಿ 545 ಪಿಎಸ್‌ಐಗಳನ್ನು ನೇಮಿಸಿಕೊಳ್ಳಲು ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಫಲಿತಾಂಶಗಳು ಪ್ರಕಟವಾದ ನಂತರ, ಅವ್ಯವಹಾರದ ಆರೋಪಗಳು ವರದಿಯಾಗಿ ಹಲವಾರು ಎಫ್‌ಐಆರ್‌ಗಳು ದಾಖಲಾದವು.

ಪ್ರಸ್ತುತ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ. ತನಿಖೆ ವೇಳೆ ಸಿಐಡಿ ಆರ್.ಡಿ.ಪಾಟೀಲ್ ಸೇರಿದಂತೆ 100ಕ್ಕೂ ಹೆಚ್ಚು ಜನರನ್ನು ಬಂಧಿಸಿತ್ತು. ಕೆಇಎ ಹಗರಣದಲ್ಲಿ ಹೆಸರು ಕಾಣಿಸಿಕೊಂಡಾಗ ಆತ ಜಾಮೀನಿನ ಮೇಲೆ ಹೊರಗಿದ್ದ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು