65 ವರ್ಷದ ವೃದ್ಧೆಯ ಮೇಲೆ ಅತ್ಯಾ*ರ ; ಚಿಕ್ಕಬಳ್ಳಾಪುರದಲ್ಲಿ ನಡೆದಿದೆ ಬೆಚ್ಚಿಬೀಳಿಸುವ ಘಟನೆ
ಲಿಂಕ್ ನಕಲಿಸಲಾಗಿದೆ ✓
ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರದಲ್ಲಿ 65 ವರ್ಷದ ವೃದ್ಧೆಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಈ ಕೃತ್ಯ ನಡೆದೆ.
ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ಅನಾರೋಗ್ಯಕ್ಕೆ ತುತ್ತಾಗಿ ವೈದ್ಯರ ಬಳಿ ಚಿಕಿತ್ಸೆಗೆ ಬಂದಾಗಲೇ ಈ ಕೃತ್ಯ ನಡೆದಿದೆ. ಆಕೆಯ ಮೇಲೆ 24 ವರ್ಷದ ಇರ್ಫಾನ್ ಎನ್ನುವ ಯುವಕ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ 24 ವರ್ಷದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಘಟನೆ ನಡೆದ ನಂತರ ಸ್ಥಳೀಯ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.
ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫಾನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಅವರು ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Peepal Media Desk
Peepal Media · ರಾಜ್ಯ ವಿಭಾಗ